
ಹಾಸನ, 08 ನವೆಂಬರ್ (ಹಿ.ಸ.):
ಹಾಸನದ ಅಧಿದೇವತೆ, ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಶಕ್ತಿ ಸ್ವರೂಪಿಣಿ ಶ್ರೀ ಹಾಸನಾಂಬೆ ದೇವಿಯ ಸನ್ನಿಧಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಿಯ ದರ್ಶನ ಪಡೆದ ಮುಖ್ಯಮಂತ್ರಿ, ಜಗನ್ಮಾತೆಯ ಕೃಪಾಶೀರ್ವಾದದಿಂದ ನಾಡಿನ ಪ್ರತಿಯೊಂದು ಮನೆಯಲ್ಲೂ ಸುಖ, ಶಾಂತಿ, ನೆಮ್ಮದಿ ನೆಲೆಸಲಿ. ಎಲ್ಲರ ಬದುಕಿನಲ್ಲಿ ಒಳಿತು, ಸಂತೋಷ ಹಾಗೂ ಸಮೃದ್ಧಿ ತುಂಬಿರಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ, ಸಂಸದ ಶ್ರೇಯಸ್ ಎಂ. ಪಟೇಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.