ಕಬ್ಬು ಬೆಳೆಗಾರರ ಪ್ರತಿಭಟನೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಶ್ರೀ ಮರುಳಾರಾಧ್ಯ ಸ್ವಾಮೀಜಿ ಆಕ್ರೋಶ
ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ ಕಲಬುರಗಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಶ್ಯಾಳ ಮಠದ ಶ್ರೀ ಮರುಳಾರಾಧ್ಯ ಸ್ವಾಮೀಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
Marularadhya-Swamiji-Slams-Priyank-Kharge-Over-Sugarcane-Farmers-Issue


ಕಲಬುರಗಿ, 08 ನವೆಂಬರ್ (ಹಿ.ಸ.):

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಶ್ಯಾಳ ಮಠದ ಶ್ರೀ ಮರುಳಾರಾಧ್ಯ ಸ್ವಾಮೀಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಫಜಲಪುರ ತಾಲೂಕಿನ ಮಾಶ್ಯಾಳ ಗ್ರಾಮದ ಮಠದ ಶ್ರೀ ಮರುಳಾರಾಧ್ಯ ಸ್ವಾಮೀಜಿ, ರೈತರ ಸಮಸ್ಯೆಗಳ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡರು.

ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಎಲ್ಲರೂ ಜಿಲ್ಲಾಧಿಕಾರಿ ಹಾಗೂ ಶಾಸಕರ ಹೆಸರನ್ನು ಹೇಳುತ್ತಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ಏನು ಊಟ ಮಾಡಿ ಮಲಗಿದ್ದಾರೆಯೇ? ರೈತರ ವಿಚಾರ ಬಂದಾಗ ನಿನಗೆ ಧಮ್ ಇಲ್ವೇನು? ಎಂದು ಏಕವಚನದಲ್ಲೇ ಪ್ರಶ್ನಿಸುವ ಮೂಲಕ ಸಚಿವರ ವಿರುದ್ಧ ಕಿಡಿಕಾರಿದರು.

ರೈತರು ತಮ್ಮ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಜನಪ್ರತಿನಿಧಿಗಳು ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂಬ ಆಗ್ರಹ ಪ್ರತಿಭಟನೆಯಲ್ಲಿ ವ್ಯಕ್ತವಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande