
ನವದೆಹಲಿ, 08 ನವೆಂಬರ್ (ಹಿ.ಸ.):
ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯ ದೀಪಾವಳಿ ಹಬ್ಬವನ್ನು ಛತ್ತೀಸ್ಗಢದ ಬಸ್ತರ್ನಲ್ಲಿ ಭದ್ರತಾ ಪಡೆಗಳ ಯೋಧರೊಂದಿಗೆ ಆಚರಿಸಲಿದ್ದಾರೆ.
ಪ್ರತಿ ವರ್ಷದಂತೆ ಈ ಬಾರಿಯೂ ಯೋಧರೊಂದಿಗೆ ದೀಪಾವಳಿಯ ಸಂಭ್ರಮ ಹಂಚಿಕೊಳ್ಳಲು ಪ್ರಧಾನಿ ಮೋದಿ ಬಸ್ತರ್ಗೆ ತೆರಳಲಿದ್ದಾರೆ. ಈ ಕುರಿತು ಅವರು ಇಂದು ಬೆಳಿಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
“ದೀಪಾವಳಿಯ ಪವಿತ್ರ ಸಂದರ್ಭದಲ್ಲಿ ಬಸ್ತರ್ಗೆ ತೆರಳುತ್ತಿದ್ದೇನೆ. ನಿನ್ನೆವರೆಗೂ ನಕ್ಸಲರ ಹಾವಳಿ ಇದ್ದ ಪ್ರದೇಶದಲ್ಲಿ ಇಂದು ಅಭಿವೃದ್ಧಿಯ ಸುಗಾಳಿ ಬೀಸುತ್ತಿದೆ. ದೇಶದ ಭದ್ರತೆಗಾಗಿ ಶ್ರಮಿಸುತ್ತಿರುವ ವೀರ ಯೋಧರನ್ನು, ಅವರ ತ್ಯಾಗ, ಬಲಿದಾನ ಮತ್ತು ಸಮರ್ಪಣಾ ಮನೋಭಾವವನ್ನು ಗೌರವಿಸಿ ನಮನ ಸಲ್ಲಿಸಲು ತೆರಳುತ್ತಿದ್ದೇನೆ” ಎಂದು ಅವರು ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ದೀಪಾವಳಿ ಹಬ್ಬದ ಅಂಗವಾಗಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ದೇಶದ ಪ್ರತಿಯೊಬ್ಬರ ಜೀವನದಲ್ಲಿ ಸುಖ, ಆರೋಗ್ಯ ಮತ್ತು ಸಮೃದ್ಧಿ ನೆಲೆಸಲಿ ಎಂದು ಹಾರೈಸಿದ್ದಾರೆ.
“ದೇಶದಾದ್ಯಂತ ಇರುವ ನನ್ನ ಕುಟುಂಬದ ಎಲ್ಲ ಸದಸ್ಯರಿಗೂ ದೀಪಾವಳಿಯ ಹೃತ್ಪೂರ್ವಕ ಶುಭಾಶಯಗಳು” ಎಂದು ತಿಳಿಸಿದ್ದಾರೆ.
ಕಾರ್ತಿಕ ಅಮಾವಾಸ್ಯೆಯ ಅಂಗವಾಗಿ ಇಂದು ದೇಶಾದ್ಯಂತ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮನೆಗಳು ಹಾಗೂ ದೇವಾಲಯಗಳನ್ನು ದೀಪಗಳಿಂದ ಅಲಂಕರಿಸಲಾಗಿದ್ದು, ಎಲ್ಲೆಡೆ ಹಬ್ಬದ ಸಂಭ್ರಮ ಮನೆಮಾಡಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.