ಬಾಗಲಕೋಟೆ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಯಲ್ಲಪ್ಪ ಹೆಗಡೆ ಮನವಿ
ಬಾಗಲಕೋಟೆ, 08 ನವೆಂಬರ್ (ಹಿ.ಸ.) ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ (ಬಿಡಿಸಿಸಿ ಬ್ಯಾಂಕ್) ನಿರ್ದೇಶಕ ಮಂಡಳಿ ಚುನಾವಣೆಯ ಹಿನ್ನೆಲೆಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಹಿನ್ನೆಲೆಯಲ್ಲಿ ಲೋಕಾಪೂರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಾಮಾಜಿಕ ಹೋರಾಟಗಾರ ಯಲ್ಲ
D c c bank election


ಬಾಗಲಕೋಟೆ, 08 ನವೆಂಬರ್ (ಹಿ.ಸ.)

ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ (ಬಿಡಿಸಿಸಿ ಬ್ಯಾಂಕ್) ನಿರ್ದೇಶಕ ಮಂಡಳಿ ಚುನಾವಣೆಯ ಹಿನ್ನೆಲೆಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಹಿನ್ನೆಲೆಯಲ್ಲಿ ಲೋಕಾಪೂರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಾಮಾಜಿಕ ಹೋರಾಟಗಾರ ಯಲ್ಲಪ್ಪ ಹೆಗಡೆ ಅವರು, ಬ್ಯಾಂಕ್ನ ಚುನಾವಣೆಯಲ್ಲಿ ಸೂಕ್ತ ಹಾಗೂ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಜಿಲ್ಲೆಯ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (ಪಿ.ಕೆ.ಪಿ.ಎಸ್.) ಅಧ್ಯಕ್ಷರು ಮತ್ತು ನಿರ್ದೇಶಕರಿಗೆ ಮನವಿ ಮಾಡಿದ್ದಾರೆ.

ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಜಿಲ್ಲೆಯ ರೈತರು, ಕೃಷಿಕರು ಹಾಗೂ ಸಹಕಾರಿ ಸಂಘಗಳ ಆರ್ಥಿಕ ಚಟುವಟಿಕೆಗಳಿಗೆ ಪ್ರಮುಖ ಆಧಾರವಾಗಿದೆ. ಇಂತಹ ಮಹತ್ವದ ಸಹಕಾರಿ ಸಂಸ್ಥೆಯ ಆಡಳಿತ ಮಂಡಳಿಗೆ ನಡೆಯುವ ಚುನಾವಣೆ ಜವಾಬ್ದಾರಿಯುತವಾಗಿದ್ದು, ಮತದಾನದ ಹಕ್ಕು ಹೊಂದಿರುವ ಪಿ.ಕೆ.ಪಿ.ಎಸ್. ಸಂಘಗಳ ಅಧ್ಯಕ್ಷರು ಮತ್ತು ನಿರ್ದೇಶಕರು ತಮ್ಮ ಜವಾಬ್ದಾರಿಯನ್ನು ಅರಿತು ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಬ್ಯಾಂಕ್ನ ಅಭಿವೃದ್ಧಿ, ರೈತರಿಗೆ ದೊರೆಯುವ ಸಾಲ ಸೌಲಭ್ಯಗಳು, ಸಹಕಾರಿ ಕ್ಷೇತ್ರದ ಬಲವರ್ಧನೆ ಹಾಗೂ ಸಂಘಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳ ಆಯ್ಕೆ ಮಾಡಬೇಕು. ವೈಯಕ್ತಿಕ ಹಿತಾಸಕ್ತಿ ಅಥವಾ ಇತರ ಪ್ರಭಾವಗಳಿಗೆ ಒಳಗಾಗದೆ, ಸಹಕಾರಿ ಕ್ಷೇತ್ರದ ಬಗ್ಗೆ ಕಾಳಜಿ ಹೊಂದಿರುವ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಸಾಮರ್ಥ್ಯವಿರುವ ಸೂಕ್ತ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದರು.

ಜಿಲ್ಲೆಯ ಸಹಕಾರಿ ವ್ಯವಸ್ಥೆ ಮತ್ತಷ್ಟು ಸದೃಢವಾಗಲು ಸಮರ್ಥ ನಾಯಕತ್ವದ ಅಗತ್ಯವಿದೆ. ಹೀಗಾಗಿ ಪ್ರತಿಯೊಂದು ಪಿ.ಕೆ.ಪಿ.ಎಸ್. ಸಂಘದ ಅಧ್ಯಕ್ಷರು ಮತ್ತು ನಿರ್ದೇಶಕರು ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ, ಬ್ಯಾಂಕ್ನ ಭವಿಷ್ಯದ ಹಿತದೃಷ್ಟಿಯಿಂದ ವಿವೇಚನೆಯಿಂದ ಮತ ಚಲಾಯಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಯಲ್ಲಪ್ಪ ಹೆಗಡೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande