ನವೆಂಬರ್ 13 ರಂದು ಅಂಬೇಡ್ಕರ್ ಓದು ಕಾರ್ಯಕ್ರಮ
ಬಳ್ಳಾರಿ, 09 ನವೆಂಬರ್ (ಹಿ.ಸ.) ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ ಬದುಕು ಮತ್ತು ಸಾಧನೆಗಳ ಪರಿಚಯಕ್ಕಾಗಿ ನವೆಂಬರ್ 13 ರಂದು ಬೆಳಿಗ್ಗೆ 11 ಗಂಟೆಗೆ ನಗರದ ರೇಡಿಯೋ ಪಾರ್ಕ್ ನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ‘ಅಂಬೇಡ್ಕರ್ ಓದ
'Ambedkar Odu' on November 13


ಬಳ್ಳಾರಿ, 09 ನವೆಂಬರ್ (ಹಿ.ಸ.)

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ ಬದುಕು ಮತ್ತು ಸಾಧನೆಗಳ ಪರಿಚಯಕ್ಕಾಗಿ ನವೆಂಬರ್ 13 ರಂದು ಬೆಳಿಗ್ಗೆ 11 ಗಂಟೆಗೆ ನಗರದ ರೇಡಿಯೋ ಪಾರ್ಕ್ ನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ‘ಅಂಬೇಡ್ಕರ್ ಓದು’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಅವರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯರಿಗಾಗಿ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಈ ಸಮಾರಂಭದಲ್ಲಿ ಪುಸ್ತಕ ರೂಪದಲ್ಲಿ ಬಹುಮಾನಗಳನ್ನು ವಿತರಿಸಲಾಗುವುದು.

ತೊಗಲುಗೊಂಬೆ ಕಲಾವಿದರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ಹುಲಿಗೆಮ್ಮ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಜ್ಞಾ ಕೆ.ವಿ. ಅವರು ಅಧ್ಯಕ್ಷತೆ ವಹಿಸುವರು.

ನಗರದ ಕಂಬಳಿ ಬಜಾರ್ ನ ಸರ್ಕಾರಿ ಪ್ರೌಢಶಾಲೆಯ ಕನ್ನಡ ಶಿಕ್ಷಕರಾದ ವಸುಧ ಧಾರವಾರ್ ಅವರು ವಿಶೇಷ ಉಪನ್ಯಾಸ ನೀಡುವರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಕೆ. ಮಲ್ಲಿಕಾರ್ಜುನ ಹಾಗೂ ಕನ್ನಡದ ವಿಭಾಗದ ಮುಖ್ಯಸ್ಥ ಡಾ. ಸಿ. ಕೊಟ್ರಪ್ಪ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿರುವರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande