ಬಳ್ಳಾರಿ: ಶಿಶುಪಾಲನಾ ಕೇಂದ್ರ ಆರಂಭಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ, 09 ನವೆಂಬರ್ (ಹಿ.ಸ.) ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲವಾಗುವಂತೆ 6 ತಿಂಗಳಿಂದ 6 ವರ್ಷದ ಒಳಗಿನ ಮಕ್ಕಳ ಆರೈಕೆಗಾಗಿ ಬಳ್ಳಾರಿಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಶಿಶುಪಾಲನಾ ಕೇಂದ್ರವನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ. ಈ ಕೇಂದ್ರದ ನಿರ್ವಹಣೆಯನ್ನು ಮಾಡಲು ಮೊದಲ ಆದ
ಬಳ್ಳಾರಿ: ಶಿಶುಪಾಲನಾ ಕೇಂದ್ರ ಆರಂಭಕ್ಕೆ ಅರ್ಜಿ ಆಹ್ವಾನ


ಬಳ್ಳಾರಿ, 09 ನವೆಂಬರ್ (ಹಿ.ಸ.)

ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲವಾಗುವಂತೆ 6 ತಿಂಗಳಿಂದ 6 ವರ್ಷದ ಒಳಗಿನ ಮಕ್ಕಳ ಆರೈಕೆಗಾಗಿ ಬಳ್ಳಾರಿಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಶಿಶುಪಾಲನಾ ಕೇಂದ್ರವನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ.

ಈ ಕೇಂದ್ರದ ನಿರ್ವಹಣೆಯನ್ನು ಮಾಡಲು ಮೊದಲ ಆದ್ಯತೆಯಾಗಿ ಜಿಲ್ಲಾ ಅಥವಾ ತಾಲೂಕು ಸ್ತ್ರೀಶಕ್ತಿ ಒಕ್ಕೂಟಗಳಿಗೆ ಅವಕಾಶ ನೀಡಲಾಗುತ್ತದೆ. ಒಂದು ವೇಳೆ ಸ್ತ್ರೀ ಶಕ್ತಿ ಒಕ್ಕೂಟಗಳು ನಿರಾಕರಿಸಿದಲ್ಲಿ, ಸರ್ಕಾರದಿಂದ ದೃಢೀಕರಿಸಲ್ಪಟ್ಟ ಮಕ್ಕಳ ಆರೈಕೆಗೆ ಸಂಬಂಧಪಟ್ಟ ವಿದ್ಯಾರ್ಹತೆ ಹೊಂದಿರುವ ಮಹಿಳಾ ಸಿಬ್ಬಂದಿಗಳನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆ ಅಥವಾ ಸ್ವಸಹಾಯ ಸಂಘಗಳನ್ನು ನೇಮಿಸಲಾಗುತ್ತದೆ.

ಅರ್ಜಿಗಳನ್ನು ಕಚೇರಿ ವೇಳೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಅರ್ಜಿಗಳನ್ನು ಪಡೆದುಕೊಂಡು, ಜಿಲ್ಲಾ/ತಾಲೂಕು ಸ್ತ್ರೀಶಕ್ತಿ ಒಕ್ಕೂಟಗಳು ಅಥವಾ ಸ್ವಯಂ ಸೇವಾ ಸಂಸ್ಥೆಯವರು ಅಗತ್ಯ ದಾಖಲಾತಿಗಳನ್ನು ದೃಢೀಕರಿಸಿ ಅರ್ಜಿಯೊಂದಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ನವೆಂಬರ್ 26 ರಂದು ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದೇವಿಗರ, ಎಸ್.ಪಿ. ಸರ್ಕಲ್, ಸ್ತ್ರೀ ಸೇವಾನಿಕೇತನ ಆವರಣ, ಬಳ್ಳಾರಿ – 583103 ಅಥವಾ ಮೊಬೈಲ್ ಸಂಖ್ಯೆ: 9980920111 ಗೆ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande