ನ.12ರಂದು ಬಳ್ಳಾರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ
ಬಳ್ಳಾರಿ, 09 ನವೆಂಬರ್ (ಹಿ.ಸ.): ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 12ರಂದು ಜಿಲ್ಲಾ ಮಟ್ಟದ ಮಕ್ಕಳ
ನ.12ರಂದು ಬಳ್ಳಾರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ


ಬಳ್ಳಾರಿ, 09 ನವೆಂಬರ್ (ಹಿ.ಸ.):

ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 12ರಂದು ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ನಗರದ ಜಿಲ್ಲಾ ಪಂಚಾಯಿತಿ ನಜೀರ್ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಲೇಖಕ ಡಾ. ಕುಂಭಾರ ವೀರಭದ್ರಪ್ಪ ಕೊಟ್ಟೂರು ಉದ್ಘಾಟಿಸುವರು. ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಜಿಲ್ಲಾ ಬಾಲಭವನ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್ ಎನ್. ಹೊಸಮನೆ, ಜಿಲ್ಲಾ ಬಾಲಭವನ ಸಮಿತಿ ಸದಸ್ಯರೂ ಆಗಿರುವ ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಬಸವರಾಜ ಕೆ.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ, ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪನಿರ್ದೇಶಕ ಡಾ. ಜಿ.ಎಂ. ತಿಪ್ಪೇಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಬಿ. ವಿಜಯ ಭಾಸ್ಕರ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಶಶಿಕಾಂತ್ ಕೋಟಿಮನಿ ಸೇರಿದಂತೆ ಹಲವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಹಾಗೂ ಜಿಲ್ಲಾ ಬಾಲಭವನ ಸಮಿತಿಯ ಸದಸ್ಯ ಕಾರ್ಯದರ್ಶಿ ರಾಮಕೃಷ್ಣ ನಾಯಕ ಎಂ. ಅವರು ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡುವರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಸವಿತಾ ಸಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವೀರಣ್ಣಗೌಡ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧೆ ನಂದಿನಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ತ್ರಿವೇಣಿ ಪತ್ತಾರ್ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande