
ಶ್ರೀರಂಗಪಟ್ಟಣ, 09 ನವೆಂಬರ್ (ಹಿ.ಸ.):
ಅಂಗಡಿಯ ಬೀಗ ಮುರಿದು ನಗದು ಸೇರಿದಂತೆ ಹಲವು ವಸ್ತುಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಶ್ರೀರಂಗಪಟ್ಟಣ ಟೌನ್ನ ಗಂಜಾಮ್ನ ಮೈಸೂರು-ಬೆಂಗಳೂರು ಹೆದ್ದಾರಿಯ ಸರ್ವೀಸ್ ರಸ್ತೆಯ ಬಳಿ ನಡೆದಿದೆ.
ಗಂಜಾಮ್ನ ಹೆದ್ದಾರಿ ಸರ್ವೀಸ್ ರಸ್ತೆಯ ಬಳಿ ಮನುಸಿಂಗ್ ಅವರಿಗೆ ಸೇರಿದ ಕಬ್ಬಿಣದ ಪೆಟ್ಟಿ ಅಂಗಡಿಯನ್ನು ಕಳ್ಳರು ಗುರಿಯಾಗಿಸಿಕೊಂಡಿದ್ದಾರೆ. ಮನುಸಿಂಗ್ ಅವರು ಈ ಪುಟ್ಟ ಅಂಗಡಿಯಲ್ಲಿ ಕಾಫಿ, ಟೀ ಹಾಗೂ ತಿಂಡಿ-ಊಟ ಮಾರಾಟ ಮಾಡುವ ಮೂಲಕ ಜೀವನ ಸಾಗಿಸುತ್ತಿದ್ದರು.
ಮಧ್ಯರಾತ್ರಿ ವೇಳೆ ಅಂಗಡಿಯ ಬೀಗ ಮುರಿದು ಒಳನುಗ್ಗಿದ ಕಳ್ಳರು, ಅಂಗಡಿಯಲ್ಲಿದ್ದ ನಗದು ಹಣ, ಸ್ಟವ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಇತರೆ ಅಗತ್ಯ ವಸ್ತುಗಳನ್ನು ಕಳವು ಮಾಡಿದ್ದಾರೆ. ಬೆಳಗ್ಗೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದ್ದು, ಜೀವನೋಪಾಯಕ್ಕೆ ಆಧಾರವಾಗಿದ್ದ ಅಂಗಡಿಯಲ್ಲಿನ ವಸ್ತುಗಳು ಕಳವಾಗಿರುವುದರಿಂದ ಮಾಲೀಕ ಮನುಸಿಂಗ್ ಆತಂಕಕ್ಕೊಳಗಾಗಿದ್ದಾರೆ.
ಘಟನಾ ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R