ಸವದತ್ತಿಯ 100 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಗೆ ಶಂಕುಸ್ಥಾಪನೆ
ಸವದತ್ತಿ, 16 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ 100 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿ ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತ
Hospital


ಸವದತ್ತಿ, 16 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ 100 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಂಕುಸ್ಥಾಪನೆ ನೆರವೇರಿಸಿದರು.

ಈ ವೇಳೆ ಮಾತನಾಡಿ ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ₹30 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ವಿಸ್ತರಣೆಯಿಂದ ಆಸ್ಪತ್ರೆಯಲ್ಲಿ ಆಧುನಿಕ ವೈದ್ಯಕೀಯ ಸೌಲಭ್ಯಗಳು ವಿಸ್ತರಿಸಿ, ರೋಗಿಗಳಿಗೆ ಹೆಚ್ಚು ಸಮರ್ಪಕ ಮತ್ತು ಗುಣಮಟ್ಟದ ಚಿಕಿತ್ಸೆ ಲಭ್ಯವಾಗಲಿದೆ. ಗ್ರಾಮೀಣ ಭಾಗದ ಜನರಿಗೆ ಸಮೀಪದಲ್ಲೇ ಉತ್ತಮ ಆರೋಗ್ಯ ಸೇವೆ ದೊರೆಯಲಿದೆ ಎಂದರು.

ಆಸ್ಪತ್ರೆಯ ಮೂಲಸೌಕರ್ಯ ಬಲಪಡಿಸುವುದರಿಂದ ಸ್ಥಳೀಯ ಆರೋಗ್ಯ ವ್ಯವಸ್ಥೆಗೆ ಹೊಸ ಚೈತನ್ಯ ಸಿಗಲಿದ್ದು, ಸಾರ್ವಜನಿಕ ಆರೋಗ್ಯ ಸೇವೆಯ ಮಟ್ಟ ಮತ್ತಷ್ಟು ಸುಧಾರಿಸಲಿದೆ. ನಮ್ಮ ಸರ್ಕಾರ ಸಮಗ್ರ ಕರ್ನಾಟಕದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಕಾರ್ಯವನ್ನು ಮುಂದುವರಿಸಿದೆ ಎಂದು‌ ಸಚಿವರು ಹೇಳಿದರು ‌

ಈ ಸಂದರ್ಭದಲ್ಲಿ ಸವದತ್ತಿ-ಯಲ್ಲಮ್ಮ ಕ್ಷೇತ್ರದ ಶಾಸಕರಾದ ವಿಶ್ವಾಸ್ ವ. ವೈದ್ಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande