
ವಿಜಯಪುರ, 16 ಫೆಬ್ರವರಿ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಸಂಗಾಪುರ ಕ್ರಾಸ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಡವಿ ಸಂಗಾಪುರ ಗ್ರಾಮದ ಬಾಳವ್ವ ಸಂಗಾಪುರ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಬಬಲೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಬಬಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande