
ಬೆಂಗಳೂರು, 16 ಫೆಬ್ರವರಿ (ಹಿ.ಸ.):
ಆ್ಯಂಕರ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ರಾಜ್ಯ ಆಯವ್ಯಯದ ಪೂರ್ವಭಾವಿ ಸಿದ್ಧತೆಯ ಅಂಗವಾಗಿ ಸಾರಿಗೆ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ಸಾರಿಗೆ ಕ್ಷೇತ್ರದ ಸಮಸ್ಯೆಗಳು, ಮೂಲಸೌಕರ್ಯ ಅಭಿವೃದ್ಧಿ, ವಾಹನಗಳ ನವೀಕರಣ, ಡೀಸೆಲ್ ಬೆಲೆ ಏರಿಕೆ ಪರಿಣಾಮ, ವಿದ್ಯುತ್ ವಾಹನಗಳ ಪ್ರೋತ್ಸಾಹ ಹಾಗೂ ಕಾರ್ಮಿಕ ಕಲ್ಯಾಣ ಸೇರಿದಂತೆ ಹಲವು ವಿಷಯಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು. ಪ್ರತಿನಿಧಿಗಳು ತಮ್ಮ ಬೇಡಿಕೆಗಳು ಮತ್ತು ಸಲಹೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಸಚಿವ ರಾಮಲಿಂಗಾರೆಡ್ಡಿ, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa