
ಗದಗ, 16 ಫೆಬ್ರವರಿ (ಹಿ.ಸ.)
ಆ್ಯಂಕರ್:
ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗದಗ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಗ್ಯಾರಂಟಿ ಕಾರ್ಯಾಗಾರ ಹಾಗೂ ಉತ್ಸವವನ್ನು ಫೆಬ್ರುವರಿ 18 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಎ.ಪಿ.ಎಂ.ಸಿ. ಯಾರ್ಡದಲ್ಲಿನ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ರಾಜ್ಯದ ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಗೌರವ ಉಪಸ್ಥಿತಿಯನ್ನು ಸರ್ಕಾರಿ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಶಾಸಕ ಸಲೀಂ ಅಹ್ಮದ್, ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಉಪಾಧ್ಯಕ್ಷ ( ಬೆಳಗಾವಿ ವಿಭಾಗ) ಎಸ್.ಆರ್.ಪಾಟೀಲ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಉಪಾಧ್ಯಕ್ಷ ( ಮೈಸೂರು ವಿಭಾಗ) ಡಾ. ಪುಷ್ಪಾ ಅಮರನಾಥ , ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಉಪಾಧ್ಯಕ್ಷ (ಬೆಂಗಳೂರು-1) ಸೂರಜ್ ಹೆಗಡೆ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಉಪಾಧ್ಯಕ್ಷ ( ಕಲಬುರ್ಗಿ ವಿಭಾಗ) ಎಸ್.ಆರ್.ಮೆಹರೂಜ್ ಖಾನ್ ವಹಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ.ಗದ್ದಿಗೌಡರ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್.ಪಾಟೀಲ, ನರಗುಂದ ಶಾಸಕ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ , ವಿಧಾನ ಪರಿಷತ್ ಶಾಸಕರುಗಳಾದ ಎಸ್.ವಿ.ಸಂಕನೂರ , ಪ್ರದೀಪ್ ಶೆಟ್ಟರ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾದಿಕಾರ (ಬೆಂಗಳೂರು-2) ಹಾಗೂ ವಿಧಾನಪರಿಷತ್ ಶಾಸಕ ದಿನೇಶ ಗೂಳಿಗೌಡ , ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಬಿ.ಬಿ.ಅಸೂಟಿ, ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ವಿಶ್ಲೇಷಕರಾದ ಮುತ್ತುರಾಜು ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಉಪಾಧ್ಯಕ್ಷರುಗಳಾದ ಶ್ರೀಮತಿ ನೀಲಮ್ಮ ಬೋಳನವರ, ದೀಪಕ ಜಿ ಲಮಾಣಿ, ಹೇಮಂತಗೌಡ ಪಾಟೀಲ, ಪಿ.ಬಿ.ಅಳಗವಾಡಿ, ಫಕ್ರುಸಾಬ ಚಿಕ್ಕಮಣ್ಣೂರ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಪ್ರಾದಿಕಾರದ ಅಧ್ಯಕ್ಷರುಗಳಾದ ಅಶೋಕ ಮಂದಾಲಿ, ಸಂಗನಗೌಡ ಪಾಟೀಲ, ವಿವೇಕ ಯಾವಗಲ್ , ದೇವಪ್ಪ ಮೋರನಾಳ, ನಾಗರಾಜ ಶಿವಪ್ಪ ಮಡಿವಾಳರ, ಶರಣಪ್ಪ ಬೆಟಗೇರಿ, ವೀರಯ್ಯ ಮಠಪತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾದಿಕಾರದ ಸದಸ್ಯರುಗಳಾದ ಪುಲಕೇಶಗೌಡ ಪಾಟೀಲ, ಈಶಣ್ಣ ಹುಣಸಿಕಟ್ಟಿ, ಶರೀಫ್ ಬೆಳೆಯಲಿ, ರಾಜೀವ ಗೊಡಚಪ್ಪ ಕುಂಬಿ, ಶಿವನಗೌಡ ಪಾಟೀಲ, ಆರ್.ಆರ್.ಗಡ್ಡದ್ದೇವರಮಠ, ಗೀತಾ ಬೀರಣ್ಣವರ, ಜಿಲ್ಲೆಯ ಎಲ್ಲ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾದಿಕಾರದ ಸದಸ್ಯರು ಆಗಮಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಯೋಜನೆ ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಆಗಮಿಸಲಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎನ್.ಶ್ರೀಧರ್ ಹಾಗೂ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್ ಸರ್ವರಿಗೂ ಸ್ವಾಗತ ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP