ಮೈಸೂರು ಪೊಲೀಸ್ ಕಮಿಷನರೇಟ್ ಪ್ರಗತಿ ಪರಿಶೀಲನೆ
ಮೈಸೂರು, 16 ಫೆಬ್ರವರಿ (ಹಿ.ಸ.): ಆ್ಯಂಕರ್:ಪಿ. ಹರಿಶೇಖರನ್, ಎಡಿಜಿಪಿ (ಅಪರಾಧ ಮತ್ತು ತಾಂತ್ರಿಕ ಸೇವೆಗಳು), ಬೆಂಗಳೂರು ಅವರು ಇಂದು ಮೈಸೂರು ನಗರ ಪೊಲೀಸ್ ಆಯುಕ್ತರ ಕಛೇರಿಗೆ ಭೇಟಿ ನೀಡಿ, ಕಮಿಷನರೇಟ್‌ನ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಅಪರಾಧ ತನಿಖೆ, ಸೈಬರ್ ಕ್ರೈಮ್ ನಿಯಂತ್ರಣ, ಕಾನ
Progress Check


ಮೈಸೂರು, 16 ಫೆಬ್ರವರಿ (ಹಿ.ಸ.):

ಆ್ಯಂಕರ್:ಪಿ. ಹರಿಶೇಖರನ್, ಎಡಿಜಿಪಿ (ಅಪರಾಧ ಮತ್ತು ತಾಂತ್ರಿಕ ಸೇವೆಗಳು), ಬೆಂಗಳೂರು ಅವರು ಇಂದು ಮೈಸೂರು ನಗರ ಪೊಲೀಸ್ ಆಯುಕ್ತರ ಕಛೇರಿಗೆ ಭೇಟಿ ನೀಡಿ, ಕಮಿಷನರೇಟ್‌ನ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಅಪರಾಧ ತನಿಖೆ, ಸೈಬರ್ ಕ್ರೈಮ್ ನಿಯಂತ್ರಣ, ಕಾನೂನು ಸುವ್ಯವಸ್ಥೆ, ಸಾರ್ವಜನಿಕ ದೂರುಗಳ ನಿವಾರಣೆ ಮತ್ತು ತಾಂತ್ರಿಕ ಮೂಲಸೌಕರ್ಯಗಳ ಸುಧಾರಣೆ ಸೇರಿದಂತೆ ಹಲವು ವಿಷಯಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು. ನಗರದಲ್ಲಿ ನಡೆಯುತ್ತಿರುವ ಪ್ರಮುಖ ಪ್ರಕರಣಗಳ ತನಿಖಾ ಪ್ರಗತಿಯನ್ನು ಎಡಿಜಿಪಿ ಪರಿಶೀಲಿಸಿದರು.

ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಪಿ ಸುಂದರ್ ರಾಜ್ ಕೆ.ಎಸ್. ಹಾಗೂ ನಗರದ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಅಪರಾಧ ನಿಯಂತ್ರಣಕ್ಕೆ ತಂತ್ರಜ್ಞಾನ ಬಳಕೆ ಹೆಚ್ಚಿಸುವುದು, ಪೇಟ್ರೋಲಿಂಗ್ ಬಲಪಡಿಸುವುದು ಮತ್ತು ಸಾರ್ವಜನಿಕ ಸಹಭಾಗಿತ್ವವನ್ನು ವೃದ್ಧಿಸುವಂತೆ ಎಡಿಜಿಪಿ ಸೂಚನೆ ನೀಡಿದರು

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande