ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ
ಹುಬ್ಬಳ್ಳಿ, 16 ಫೆಬ್ರವರಿ (ಹಿ.ಸ.): ಆ್ಯಂಕರ: ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೋಪನಕೊಪ್ಪದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ನಾಲ್ಕು ತರಗತಿ ಕೊಠಡಿಗಳ ಕಾಮಗಾರಿಗೆ ಶಾಸಕ ಮಹೇಶ್ ಟೆಂಗಿನಕಾಯಿ ಶಾಲಾ ಮಕ್ಕಳೊಂದಿಗೆ ಭೂಮಿಪೂಜೆ
construction


ಹುಬ್ಬಳ್ಳಿ, 16 ಫೆಬ್ರವರಿ (ಹಿ.ಸ.):

ಆ್ಯಂಕರ:

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೋಪನಕೊಪ್ಪದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ನಾಲ್ಕು ತರಗತಿ ಕೊಠಡಿಗಳ ಕಾಮಗಾರಿಗೆ ಶಾಸಕ ಮಹೇಶ್ ಟೆಂಗಿನಕಾಯಿ ಶಾಲಾ ಮಕ್ಕಳೊಂದಿಗೆ ಭೂಮಿಪೂಜೆ ನೆರವೇರಿಸಿದರು.

ಶಾಲೆಯ ಮೂಲಸೌಕರ್ಯ ವೃದ್ಧಿಗೆ ಈ ಕಾಮಗಾರಿ ನೆರವಾಗಲಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಸೃಷ್ಟಿಯಾಗಲಿದೆ ಎಂದು ಶಾಸಕರು ಹೇಳಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯ ಎಮ್.ವೈ. ನರಗುಂದ, ಭೀರಪ್ಪ ಖಂಡೇಕರ, ಪ್ರಮುಖರಾದ ಈಶ್ವರಗೌಡ ಪಾಟೀಲ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande