ಬಳ್ಳಾರಿ : ಫೆ.17, 18 ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ
ಬಳ್ಳಾರಿ, 16 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬಳ್ಳಾರಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಫೆ.17 ಮತ್ತು 18 ರಂದು ಎರಡು ದಿನಗಳ ಕಾಲ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬಳ್ಳಾರಿ ಜಿಲ್ಲಾ ಮಟ್
ಬಳ್ಳಾರಿ : ಫೆ.17, 18 ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ


ಬಳ್ಳಾರಿ, 16 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬಳ್ಳಾರಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಫೆ.17 ಮತ್ತು 18 ರಂದು ಎರಡು ದಿನಗಳ ಕಾಲ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಬಳ್ಳಾರಿ ಜಿಲ್ಲೆಯಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 1200ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯ ಸರ್ಕಾರದ ಅಧಿಕಾರಿ-ನೌಕರರು ಭಾಗವಹಿಸಲಿದ್ದಾರೆ.

ಫೆ.17 ರಂದು ಬೆಳಿಗ್ಗೆ 10.30 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ಜರುಗಲಿದ್ದು, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಉದ್ಘಾಟಿಸಿ “ಧ್ವಜಾರೋಹಣ ಮತ್ತು ಕ್ರೀಡಾಜ್ಯೋತಿ ಸ್ವೀಕಾರ” ಮಾಡುವರು.

ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿಜೇತರಿಗೆ ಪ್ರಮಾಣ ಪತ್ರ ಮತ್ತು ಟ್ರೋಫಿ ನೀಡಲಾಗುವುದು.

ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೂ ಎರಡು ದಿನಗಳ ಕಾಲ ಶುಚಿ-ರುಚಿಯಾದ ಊಟದ ವ್ಯವಸ್ಥೆ ಮಾಡಲಾಗಿದೆ.

ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಬಳ್ಳಾರಿ ಜಿಲ್ಲೆಯ ರಾಜ್ಯ ಸರ್ಕಾರದ ಅಧಿಕಾರಿ-ನೌಕರರಿಗೆ ಎರಡು ದಿನಗಳ ‘ವಿಶೇಷ ಸಾಂದರ್ಭಿಕ ರಜೆ' ಸೌಲಭ್ಯವನ್ನು ಸರ್ಕಾರ ನೀಡಲಿದೆ.

ವಿಜೇತ ಕ್ರೀಡಾಪಟುಗಳಿಗೆ ಪ್ರಶಸ್ತಿ ವಿತರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಸಂಘದ ಉಪಾಧ್ಯಕ್ಷರಾದ ಸದಾನಂದ ನೆಲ್ಕುದ್ರಿ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande