
ಬಳ್ಳಾರಿ, 16 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿ.ಬಿ.ಎಸ್.ಇ) ಶಾಲೆಗಳ 2026-27ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಗೆ ದಾಖಲಾತಿಗೆ ಉಚಿತ ಪ್ರವೇಶಕ್ಕಾಗಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಫೆ.28 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮ0ದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ(ದೂ.08392-200125/224) ಹಾಗೂ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳಲ್ಲಿ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್