ಪ್ರಕರಣಗಳ ಗುಣಮಟ್ಟದ ತನಿಖೆಗೆ ಒತ್ತು: ಶಿವಮೊಗ್ಗ ಎಸ್‌ಪಿ ಸೂಚನೆ
ಶಿವಮೊಗ್ಗ, 16 ಫೆಬ್ರವರಿ (ಹಿ.ಸ.): ಆ್ಯಂಕರ್: ಶಿವಮೊಗ್ಗ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಇಂದು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ತನಿಖಾ ಸಹಾಯಕರ ಸಭೆ ನಡೆಸಿದರು. ಸಭೆಯಲ್ಲಿ ತನಿಖೆಯಲ್ಲಿರುವ ಪ್ರಕರಣಗಳನ್ನು ಗುಣಮಟ್ಟದ ರೀತಿಯಲ್ಲಿ ಕೈಗೊಂಡು, ಆರೋಪಿತರಿಗೆ ಶಿಕ್ಷೆಯಾಗುವಂತೆ ದೃಢವಾದ ಸಾಕ್ಷ್ಯ
Sp meeting


ಶಿವಮೊಗ್ಗ, 16 ಫೆಬ್ರವರಿ (ಹಿ.ಸ.):

ಆ್ಯಂಕರ್:

ಶಿವಮೊಗ್ಗ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಇಂದು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ತನಿಖಾ ಸಹಾಯಕರ ಸಭೆ ನಡೆಸಿದರು.

ಸಭೆಯಲ್ಲಿ ತನಿಖೆಯಲ್ಲಿರುವ ಪ್ರಕರಣಗಳನ್ನು ಗುಣಮಟ್ಟದ ರೀತಿಯಲ್ಲಿ ಕೈಗೊಂಡು, ಆರೋಪಿತರಿಗೆ ಶಿಕ್ಷೆಯಾಗುವಂತೆ ದೃಢವಾದ ಸಾಕ್ಷ್ಯ ಸಂಗ್ರಹಿಸುವುದು ಅಗತ್ಯವೆಂದು ಸೂಚಿಸಿದರು. ಪ್ರತಿ ಪ್ರಕರಣವನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಮೂಲಕ ಪ್ರಕರಣಗಳ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕೆಂದು ಮಾರ್ಗದರ್ಶನ ನೀಡಿದರು.

ಇದೇ ವೇಳೆ ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸಿ, ಅವುಗಳ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande