ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಹೊರಡಿಸಲು ಅಶೋಕ‌ ಆಗ್ರಹ
ಬೆಂಗಳೂರು, 17 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಜವಾಗಿಯೂ ಪರಿಶಿಷ್ಟ ಸಮುದಾಯಗಳ ಬಗ್ಗೆ ಕಾಳಜಿ, ಬದ್ಧತೆ ಇದ್ದರೆ, ಮಾರ್ಚ್ 6ರಂದು ಮಂಡಿಸುವ 2026-27ನೇ ಸಾಲಿನ ಬಜೆಟ್ ನಲ್ಲಿ SCSP/TSP ಹಣವನ್ನ ಬೇರೆ ಯಾವುದೇ ಯೋಜನೆಗಳಿಗೆ ವರ್ಗಾಯಿಸುವುದಿಲ್ಲ, ಪರಿಶಿಷ್ಟರ ಕಲ
Ashok


ಬೆಂಗಳೂರು, 17 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಜವಾಗಿಯೂ ಪರಿಶಿಷ್ಟ ಸಮುದಾಯಗಳ ಬಗ್ಗೆ ಕಾಳಜಿ, ಬದ್ಧತೆ ಇದ್ದರೆ, ಮಾರ್ಚ್ 6ರಂದು ಮಂಡಿಸುವ 2026-27ನೇ ಸಾಲಿನ ಬಜೆಟ್ ನಲ್ಲಿ SCSP/TSP ಹಣವನ್ನ ಬೇರೆ ಯಾವುದೇ ಯೋಜನೆಗಳಿಗೆ ವರ್ಗಾಯಿಸುವುದಿಲ್ಲ, ಪರಿಶಿಷ್ಟರ ಕಲ್ಯಾಣಕ್ಕೆ ವಿನಿಯೋಗವಾಗಬೇಕಾದ ಹಣ ದುರ್ಬಳಕೆ ಆಗುವುದಿಲ್ಲ ಎಂದು ವಾಗ್ದಾನ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಒಂದು ವೇಳೆ ಅದು ಸಾಧ್ಯವಿಲ್ಲ ಎಂದಾದರೆ ರಾಜ್ಯ ಸರ್ಕಾರ ದಿವಾಳಿ ಆಗಿದೆ ಎಂದು ಒಪ್ಪಿಕೊಂಡು ಬಜೆಟ್ ಮಂಡಿಸಿದೆ ರಾಜೀನಾಮೆ ಕೊಡಬೇಕು. ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande