ಅಕ್ರಮ ವಾಸ ; ಆರು ಬಾಂಗ್ಲಾದೇಶಿ ಪ್ರಜೆಗಳ ಬಂಧನ
ಕೋಲ್ಕತ್ತಾ, 17 ಫೆಬ್ರವರಿ (ಹಿ.ಸ.) : ಆ್ಯಂಕರ್ : ವೀಸಾ ಅವಧಿ ಮುಗಿದ ನಂತರವೂ ಅಕ್ರಮವಾಗಿ ಭಾರತದಲ್ಲಿ ತಂಗಿದ್ದ ಆರು ಬಾಂಗ್ಲಾದೇಶಿ ಪ್ರಜೆಗಳನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಪಾರ್ಕ್ ಸ್ಟ್ರೀಟ್ ಪೊಲೀಸ್ ಠಾಣೆ ತಂಡ ಕಾಲಿನ್ ಸ್ಟ್ರೀಟ್‌ನ ಹೋಟೆಲ್ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ
Arrest


ಕೋಲ್ಕತ್ತಾ, 17 ಫೆಬ್ರವರಿ (ಹಿ.ಸ.) :

ಆ್ಯಂಕರ್ : ವೀಸಾ ಅವಧಿ ಮುಗಿದ ನಂತರವೂ ಅಕ್ರಮವಾಗಿ ಭಾರತದಲ್ಲಿ ತಂಗಿದ್ದ ಆರು ಬಾಂಗ್ಲಾದೇಶಿ ಪ್ರಜೆಗಳನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ.

ಪಾರ್ಕ್ ಸ್ಟ್ರೀಟ್ ಪೊಲೀಸ್ ಠಾಣೆ ತಂಡ ಕಾಲಿನ್ ಸ್ಟ್ರೀಟ್‌ನ ಹೋಟೆಲ್ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಬಂಧಿತರು ಬಾಂಗ್ಲಾದೇಶದ ಆವಾಮಿ ಲೀಗ್ ಪಕ್ಷದೊಂದಿಗೆ ಸಂಪರ್ಕ ಹೊಂದಿದ್ದಾರೆ.

ಆರೋಪಿಗಳನ್ನು ಬ್ಯಾಂಕಶಾಲ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಫೆಬ್ರವರಿ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶಿಕ್ಷಾ ಅವಧಿ ಬಳಿಕ ಕಾನೂನು ಪ್ರಕಾರ ಅವರನ್ನು ಬಾಂಗ್ಲಾದೇಶಕ್ಕೆ ಹಿಂತಿರುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande