
ಬೆಳಗಾವಿ, 17 ಫೆಬ್ರವರಿ (ಹಿ.ಸ.):
ಆ್ಯಂಕರ್:
ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ. ರಾಜ್ಯದಲ್ಲಿ ಈ ಬಗ್ಗೆ ಚರ್ಚಿಸಿದರೆ ಅಕ್ಷಮ್ಯ ಅಪರಾಧ ಆಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು,
ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಅನವಶ್ಯಕ ಈ ಕುರಿತು ಹೈಕಮಾಂಡ ನಿರ್ಧಾರ ಅಂತಿಮ ಎಂದರು.
ಇದೇ ವೇಳೆ ಬೆಳಗಾವಿ ಜಿಲ್ಲೆಯಲ್ಲಿ ವರ್ಷದ 9 ತಿಂಗಳು ಮಳೆಯಾದರೂ ಬೇಸಿಗೆ ವೇಳೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದೇ ಇರುತ್ತದೆ. ಈ ಬಾರಿ ಅಂತಹ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.
ಹಿರೇ ಬಾಗೇವಾಡಿ ಗ್ರಾಮದಲ್ಲಿ ಬಸ್ ನಿಲ್ದಾಣದ ಅವಶ್ಯಕತೆ ಇದೆ. ಈಗಾಗಲೇ ಪ್ರಸ್ತಾವನೆಯೂ ಸಿದ್ಧಗೊಂಡಿದೆ. ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ್ದು, ಬಸ್ ನಿಲ್ದಾಣಕ್ಕೆ ಸೂಕ್ತ ಜಾಗದ ಕೊರತೆ ಕಾಡುತ್ತಿದೆ. ಶೀಘ್ರವೇ ಇದಕ್ಕೆ ಪರಿಹಾರ ಸಿಗಲಿದೆ. ಅಲ್ಲದೆ, ಬೆಳಗಾವಿ ಗ್ರಾಮೀಣ ತಾಲೂಕು ರಚನೆ ಬಗ್ಗೆಯೂ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa