ಸರ್ಕಾರಿ ನೌಕರರ ಪ್ರಾಮಾಣಿಕತೆಯಿಂದ ಸರ್ಕಾರಕ್ಕೆ ಗೌರವ : ಶಾಸಕ ನಾರಾ ಭರತರೆಡ್ಡಿ
ಬಳ್ಳಾರಿ, 17 ಫೆಬ್ರವರಿ (ಹಿ.ಸ.) ಆ್ಯಂಕರ್ : ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯದಿಂದ ರಾಜ್ಯ ಸರ್ಕಾರಕ್ಕೆ ಗೌರವ ಬರಲಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ
ಸರ್ಕಾರಿ ನೌಕರರ ಪ್ರಾಮಾಣಿಕತೆಯಿಂದ ಸರ್ಕಾರಕ್ಕೆ ಗೌರವ : ಶಾಸಕ ನಾರಾ ಭರತರೆಡ್ಡಿ


ಸರ್ಕಾರಿ ನೌಕರರ ಪ್ರಾಮಾಣಿಕತೆಯಿಂದ ಸರ್ಕಾರಕ್ಕೆ ಗೌರವ : ಶಾಸಕ ನಾರಾ ಭರತರೆಡ್ಡಿ


ಸರ್ಕಾರಿ ನೌಕರರ ಪ್ರಾಮಾಣಿಕತೆಯಿಂದ ಸರ್ಕಾರಕ್ಕೆ ಗೌರವ : ಶಾಸಕ ನಾರಾ ಭರತರೆಡ್ಡಿ


ಸರ್ಕಾರಿ ನೌಕರರ ಪ್ರಾಮಾಣಿಕತೆಯಿಂದ ಸರ್ಕಾರಕ್ಕೆ ಗೌರವ : ಶಾಸಕ ನಾರಾ ಭರತರೆಡ್ಡಿ


ಸರ್ಕಾರಿ ನೌಕರರ ಪ್ರಾಮಾಣಿಕತೆಯಿಂದ ಸರ್ಕಾರಕ್ಕೆ ಗೌರವ : ಶಾಸಕ ನಾರಾ ಭರತರೆಡ್ಡಿ


ಸರ್ಕಾರಿ ನೌಕರರ ಪ್ರಾಮಾಣಿಕತೆಯಿಂದ ಸರ್ಕಾರಕ್ಕೆ ಗೌರವ : ಶಾಸಕ ನಾರಾ ಭರತರೆಡ್ಡಿ


ಸರ್ಕಾರಿ ನೌಕರರ ಪ್ರಾಮಾಣಿಕತೆಯಿಂದ ಸರ್ಕಾರಕ್ಕೆ ಗೌರವ : ಶಾಸಕ ನಾರಾ ಭರತರೆಡ್ಡಿ


ಬಳ್ಳಾರಿ, 17 ಫೆಬ್ರವರಿ (ಹಿ.ಸ.)

ಆ್ಯಂಕರ್ : ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯದಿಂದ ರಾಜ್ಯ ಸರ್ಕಾರಕ್ಕೆ ಗೌರವ ಬರಲಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಪ್ರಾರಂಭವಾದ ಎರೆಡು ದಿನಗಳ ಬಳ್ಳಾರಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಸರ್ಕಾರಿ ನೌಕರರು ‘ಸರ್ಕಾರಿ ಸೇವೆ-ದೇವರ ಸೇವೆ” ಎಂದು ಭಾವಿಸಿ ನಿಸ್ವಾರ್ಥ ಸೇವೆ ನೀಡುವ ಮೂಲಕ ಸಾರ್ವಜನಿಕರಿಗೆ ಪಾರದರ್ಶಕ ಆಡಳಿತ ಸೇವೆ ಒದಗಿಸಬೇಕು. ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಭವನಕ್ಕೆ ಸರ್ಕಾರದ ಭೂಮಿ ಇಲ್ಲ ಎಂಬ ಬೇಡಿಕೆಗೆ ಸ್ಪಂದಿಸಿದ ಅವರು, ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದರು

ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ (ಎನ್‍ಪಿಎಸ್) ಹಳೆ ಪಿಂಚಣಿ ಯೋಜನೆಗೆ (ಒಪಿಎಸ್) ಮರಳಿ ಜಾರಿಗೊಳಸಬೇಕೆಂಬ ರಾಜ್ಯದ ಎಲ್ಲಾ ಸರ್ಕಾರಿ ನೌಕರರ ಬೇಡಿಕೆಯಾಗಿದೆ. ಈ ಕುರಿತು ಮುಖ್ಯಮಂತ್ರಿಯವರು ದೇಶದಲ್ಲಿ ಜಾರಿಯಲ್ಲಿರುವ 4 ರಾಜ್ಯಗಳಿಗೆ ಅಧ್ಯಯನ ತಂಡವನ್ನು ಕಳುಹಿಸಿದ್ದಾರೆ ಎಂದರು

ಮೇ ತಿಂಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ ಚಿಂತನೆ

ಬಳ್ಳಾರಿಯಲ್ಲಿ ಮೇ ತಿಂಗಳಿನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು

ಆಯೋಜಿಸಲು ಚಿಂತನೆ ನಡೆಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನ ಅಚ್ಚುಕಟ್ಟಾಗಿ ಆಯೋಜನೆಗೊಳ್ಳಲಿದೆ. ಸಮ್ಮೇಳನದ ಯಶಸ್ವಿಗೆ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಕೈಜೋಡಿಸಬೇಕು ಎಂದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಶಾಖೆ ಜಿಲ್ಲಾಧ್ಯಕ್ಷ (ಪ್ರಭಾರಿ) ಡಾ. ಸದಾನಂದ ನೆಲ್ಕುದ್ರಿ ಅವರು, ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ- ಮಾನಸಿಕ ಬಲವರ್ಧನೆಗೆ ದೇಹ ಸ್ಪಂದಿಸುತ್ತದೆ. ಶಿಸ್ತು - ಸಂಯಮ ಕಲಿಯಲು ಸಹಕಾರಿಯಾಗಲಿದೆ ಎಂದು ಪ್ರಾಸ್ತಾವಿಕ ಭಾಷಣದಲ್ಲಿ ತಿಳಿಸಿದರು.

ರಾಷ್ಟ್ರಮಟ್ಟದಲ್ಲಿ ಸಾಧನೆಗೈದಿರುವ ಕವಿ ಡಾ. ಶಿವಲಿಂಗಪ್ಪ ಹಂದ್ಯಾಳು, ಶಾಂತಮ್ಮ ಚೆಲುವಾದಿ, ಶೇಕ್ಷಾವಲಿ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು

ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಕೆ.ಪಿ. ರವಿಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್‍ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎನ್. ಬಸರೆಡ್ಡಿ, ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಡಾ. ಎಂ.ಟಿ. ಮಲ್ಲೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ. ಗ್ರೇಸಿ, ಅಬಕಾರಿ ಇಲಾಖೆಯ ಅಧೀಕ್ಷಕ ಅನೀಲ್ ಕುಮಾರ್ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲಾ ಶಾಖೆಯ ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು ಹಾಗೂ ಸರ್ಕಾರಿ ನೌಕರರು ಭಾಗವಹಿಸಿದ್ದರು.

ಕಂಪ್ಲಿ, ಕುರುಗೋಡು, ಸಂಡೂರು, ಸಿರುಗುಪ್ಪ ಮತ್ತು ಬಳ್ಳಾರಿ ತಾಲ್ಲೂಕುಗಳನ್ನು ಪ್ರತಿನಿಧಿಸಿದ್ದ ಸರ್ಕಾರಿ ನೌಕರರಿಂದ ಆಕರ್ಷಕ ಪಥಸಂಚಲನ ನಡೆಯಿತು. ಬಳಿಕ ಕ್ರೀಡಾಜ್ಯೋತಿ ಸ್ವೀಕರಿಸಿ, ಕ್ರೀಡಾ ಧ್ವಜಾರೋಹಣ ನೆರವೇರಿಸಲಾಯಿತು.

ಜಿಲ್ಲಾ ಕ್ರೀಡಾಂಗಣದಲ್ಲಿ ಹೊರಾಂಗಣ, ಒಳಾಂಗಣದಲ್ಲಿ ವಿವಿಧ ವಿಭಾಗದ ಕ್ರೀಡೆಗಳು ನಡೆದರೆ, ಮಹರ್ಷಿ ವಾಲ್ಮೀಕಿ ಭವನದಲ್ಲಿ ಸಾಂಸ್ಕøತಿಕ ಸ್ಪರ್ಧೆ ಕಾರ್ಯಕ್ರಮಗಳು ನಡೆದವು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande