ಅಟೋ ಶೆಲ್ಟರ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
ಗದಗ, 17 ಫೆಬ್ರವರಿ (ಹಿ.ಸ.) ಆ್ಯಂಕರ್: ಗದಗ–ಬೆಟಗೇರಿ ಅವಳಿ ನಗರದ ಪ್ರಮುಖ ಪ್ರವಾಸಿ ತಾಣವಾದ ಜಗದ್ಗುರು ಶ್ರೀ ತೋಂಟದ ಸಿದ್ಧಲಿಂಗೇಶ್ವರ ಮಠದ ಸಮೀಪ ಅಟೋ ಶೆಲ್ಟರ್ ನಿರ್ಮಾಣ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗ
ಫೋಟೋ


ಗದಗ, 17 ಫೆಬ್ರವರಿ (ಹಿ.ಸ.)

ಆ್ಯಂಕರ್:

ಗದಗ–ಬೆಟಗೇರಿ ಅವಳಿ ನಗರದ ಪ್ರಮುಖ ಪ್ರವಾಸಿ ತಾಣವಾದ ಜಗದ್ಗುರು ಶ್ರೀ ತೋಂಟದ ಸಿದ್ಧಲಿಂಗೇಶ್ವರ ಮಠದ ಸಮೀಪ ಅಟೋ ಶೆಲ್ಟರ್ ನಿರ್ಮಾಣ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ ಅವರು ಭೂಮಿಪೂಜೆ ನೆರವೇರಿಸಿದರು.

ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಟೋ ಚಾಲಕರಿಗೆ ಸುಸಜ್ಜಿತ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಈ ಅಟೋ ಶೆಲ್ಟರ್ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಸಂಚಾರ ವ್ಯವಸ್ಥೆ ಸುಗಮವಾಗುವುದರ ಜೊತೆಗೆ ಪ್ರವಾಸಿ ತಾಣಕ್ಕೆ ಬರುವವರಿಗೆ ಉತ್ತಮ ಸೌಲಭ್ಯ ದೊರೆಯಲಿದೆ ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಅಟೋ ಚಾಲಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande