
ವಿಜಯಪುರ, 17 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರ ಆರ್ಥಿಕ ಅಭಿವೃದ್ದಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಅನುಷ್ಠಾನ ಸಮಿತಿ ರಚಿಸಬೇಕಾಗಿದ್ದು, ಸಮಿತಿಯ ನಾಮನಿರ್ದೇಶಿತ ಸದಸ್ಯತ್ವಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದ ಅರ್ಹ ಆಸಕ್ತರು ದಿನಾಂಕ :27-02-2026 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande