
ಚಿತ್ರದುರ್ಗ, 17 ಫೆಬ್ರವರಿ (ಹಿ.ಸ.):
ಆ್ಯಂಕರ್:
ಚಿತ್ರದುರ್ಗ ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 20ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕವಿ ಸರ್ವಜ್ಞ ಜಯಂತಿ ಆಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಉದ್ಘಾಟಿಸಲಿದ್ದು, ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಉಪನ್ಯಾಸವನ್ನು ಚಿತ್ರದುರ್ಗ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸುರೇಶ್.ಬಿ ನೀಡಲಿದ್ದು, ಚಳ್ಳಕೆರೆ ತಾಲ್ಲೂಕಿನ ಬೋಸೇದೇವರಹಟ್ಟಿ ಮಂಜಣ್ಣ ಮತ್ತು ತಂಡ ಗೀತಗಾಯನ ಪ್ರಸ್ತುತಪಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa