ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: ಆಕ್ಷೇಪಣೆಗೆ ಅವಕಾಶ
ಬಳ್ಳಾರಿ, 17 ಫೆಬ್ರವರಿ (ಹಿ.ಸ.) ಆ್ಯಂಕರ್ : ಬಳ್ಳಾರಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆಗಾಗಿ ತಾತ್ಕಾಲಿಕವಾಗಿ ಆಯ್ಕೆಗೊಂಡ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: ಆಕ್ಷೇಪಣೆಗೆ ಅವಕಾಶ


ಬಳ್ಳಾರಿ, 17 ಫೆಬ್ರವರಿ (ಹಿ.ಸ.)

ಆ್ಯಂಕರ್ : ಬಳ್ಳಾರಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆಗಾಗಿ ತಾತ್ಕಾಲಿಕವಾಗಿ ಆಯ್ಕೆಗೊಂಡ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಮಾರ್ಚ್ 03ರ ಸಂಜೆ 5.30 ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಿಗೆ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದು.

ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಾನಗರಪಾಲಿಕೆ, ನಗರಸಭೆ, ಪಟ್ಟಣ ಪಂಚಾಯತ್, ಪುರಸಭೆ, ಗ್ರಾಮ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲಾಧಿಕಾರಿಯವರ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಸಲಾಗಿದೆ.

ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande