ಮಂಗಳೂರಿನಲ್ಲಿ ಪೊಲೀಸ್ ವಸತಿ ಗೃಹ ಉದ್ಘಾಟನೆ
ಮಂಗಳೂರು, 17 ಫೆಬ್ರವರಿ (ಹಿ.ಸ.): ಆ್ಯಂಕರ್: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಮಂಗಳೂರು ನಗರ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗಾಗಿ ನೂತನವಾಗಿ ನಿರ್ಮಿಸಲಾದ 12 ಪೊಲೀಸ್ ವಸತಿ ಗೃಹಗಳನ್ನು ಗೃಹ ಸಚಿವ ಜಿ. ಪರಮೇಶ್ವರ ಉದ್ಘಾಟಿಸಿದರು. ಇದೇ ವೇಳೆ 54 ವಸತಿಗೃಹಗಳ ನಿರ್ಮಾಣಕ್ಕೆ ಶಂಕುಸ್ಥಾ
inaugurated


ಮಂಗಳೂರು, 17 ಫೆಬ್ರವರಿ (ಹಿ.ಸ.):

ಆ್ಯಂಕರ್:

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಮಂಗಳೂರು ನಗರ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗಾಗಿ ನೂತನವಾಗಿ ನಿರ್ಮಿಸಲಾದ 12 ಪೊಲೀಸ್ ವಸತಿ ಗೃಹಗಳನ್ನು ಗೃಹ ಸಚಿವ ಜಿ. ಪರಮೇಶ್ವರ ಉದ್ಘಾಟಿಸಿದರು. ಇದೇ ವೇಳೆ 54 ವಸತಿಗೃಹಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಉದ್ಘಾಟನೆ ಬಳಿಕ ವಸತಿಗೃಹಗಳಿಗೆ ಭೇಟಿ ನೀಡಿದ ಸಚಿವರು, ಪೊಲೀಸ್ ಸಿಬ್ಬಂದಿಗಳೊಂದಿಗೆ ಮಾತುಕತೆ ನಡೆಸಿ, ಮೂಲಭೂತ ಸೌಕರ್ಯಗಳು ಸೇರಿದಂತೆ ಅವರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿದರು. ಸಿಬ್ಬಂದಿಗಳ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಬಳಿಕ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿ, ಅಪರಾಧ ನಿಯಂತ್ರಣ ಸೇರಿದಂತೆ ವಿವಿಧ ಪ್ರಮುಖ ವಿಚಾರಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಡಾ. ಅರುಣ್ ಕೆ. ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande