ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ
ಗದಗ, 17 ಫೆಬ್ರವರಿ (ಹಿ.ಸ.) ಆ್ಯಂಕರ್: ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ವತಿಯಿಂದ ನಡೆಯುತ್ತಿರುವ 10 ಹಾಗೂ 12ನೇ ತರಗತಿ ಪರೀಕ್ಷೆಗಳ ಹಿನ್ನೆಲೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಫೆಬ್ರುವರಿ 17ರಿಂದ ಏಪ್ರಿಲ್ 11ರವರೆಗೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.
ಫೋಟೋ


ಗದಗ, 17 ಫೆಬ್ರವರಿ (ಹಿ.ಸ.)

ಆ್ಯಂಕರ್:

ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ವತಿಯಿಂದ ನಡೆಯುತ್ತಿರುವ 10 ಹಾಗೂ 12ನೇ ತರಗತಿ ಪರೀಕ್ಷೆಗಳ ಹಿನ್ನೆಲೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಫೆಬ್ರುವರಿ 17ರಿಂದ ಏಪ್ರಿಲ್ 11ರವರೆಗೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಈ ಅವಧಿಯಲ್ಲಿ ನಕಲು, ಅವ್ಯವಹಾರ ಹಾಗೂ ಶಾಂತಿ ಭಂಗ ತಡೆಯುವ ಉದ್ದೇಶದಿಂದ ಗದಗ ಜಿಲ್ಲೆಯ 6 ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಫೆಬ್ರುವರಿ 17ರಿಂದ ಏಪ್ರಿಲ್ 11ರವರೆಗೆ ಪ್ರತಿದಿನ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಯಲ್ಲಿರಲಿದೆ.

ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯದಲ್ಲಿ ನಿಯೋಜಿಸಲಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ, ಇತರ ಯಾವುದೇ ವ್ಯಕ್ತಿಗಳು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಲ್ಲದೇ, ಈ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್ ಹಾಗೂ ಫೋಟೋ ಕಾಪಿಯರ್‌ಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲು ಆದೇಶಿಸಲಾಗಿದೆ.

ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಫೋನ್ ಸೇರಿದಂತೆ ಯಾವುದೇ ರೀತಿಯ ಸಂಪರ್ಕ ಸಾಧನಗಳನ್ನು ತರುವುದನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗದಗ ಜಿಲ್ಲಾಡಳಿತ ತಿಳಿಸಿದೆ.

ಪರೀಕ್ಷೆಗಳು ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯುವಂತೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande