
ಬೆಂಗಳೂರು, 17 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಶ್ರೀಮತಿ ಶೈಲಾ ಕೆ.ಡಿ ಅವರನ್ನು ಇಂದು ನಡೆದ ರಾಜ್ಯ ಪರಿಷತ್ ಕಾರ್ಯಕಾರಿಣಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಹಿರಿಯ ಉಪಾಧ್ಯಕ್ಷರಾದ ಜಿ. ನೀಲಕಂಠ ಸ್ವಾಮಿ ಅವರು, ಸಂಘದ ಮುಂದಿನ ಹಾದಿಯಲ್ಲಿ ಶೈಲಾ ಕೆ.ಡಿ ಅವರ ನಾಯಕತ್ವ ಮಹತ್ವದ ಪಾತ್ರವಹಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ರಾಜ್ಯಾಧ್ಯಕ್ಷೆ ಶ್ರೀಮತಿ ಶೈಲಾ ಕೆ.ಡಿ ಅವರನ್ನು ಸಂಘದ ಪದಾಧಿಕಾರಿಗಳು ಅಭಿನಂದಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶೈಲಾ ಕೆ.ಡಿ ಅವರು, ರಾಜ್ಯದ ಮುನಿಸಿಪಲ್ ನೌಕರರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಸಂಘವು ಗಂಭೀರವಾಗಿ ಚಿಂತನೆ ನಡೆಸಲಿದೆ ಎಂದು ತಿಳಿಸಿದರು. ಹಂತಹಂತವಾಗಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಘ ಬದ್ಧವಾಗಿದೆ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa