ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೆ ಸಕಲ ಸಿದ್ದತೆ:ಸಚಿವ ಮಧು ಬಂಗಾರಪ್ಪ
ಬೆಂಗಳೂರು, 17 ಫೆಬ್ರವರಿ (ಹಿ.ಸ.): ಆ್ಯಂಕರ್: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಯಾವುದೇ ಲೋಪದೋಷಗಳಿಲ್ಲದೆ, ಅತ್ಯಂತ ಶಿಸ್ತುಬದ್ಧವಾಗಿ ನಡೆಸಲು ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ
Madhu Bangarappa


ಬೆಂಗಳೂರು, 17 ಫೆಬ್ರವರಿ (ಹಿ.ಸ.):

ಆ್ಯಂಕರ್:

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಯಾವುದೇ ಲೋಪದೋಷಗಳಿಲ್ಲದೆ, ಅತ್ಯಂತ ಶಿಸ್ತುಬದ್ಧವಾಗಿ ನಡೆಸಲು ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.೨೮ರಿಂದ ದ್ವೀತಿಯ ಪಿಯುಸಿ ಹಾಗೂ ಮಾರ್ಚ ೧೮ರಿಂದ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ವ್ಯವಸ್ಥೆಯನ್ನು ಪಾರದರ್ಶಕ ಮತ್ತು ಕಟ್ಟುನಿಟ್ಟಿನ ಕ್ರಮಗಳೊಂದಿಗೆ ನಡೆಸಲಾಗುತ್ತದೆ ಎಂದು ವಿವರಿಸಿದರು.

ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯಗೊಳಿಸಲಾಗಿದ್ದು, ಪರೀಕ್ಷಾ ಪ್ರಕ್ರಿಯೆಯನ್ನು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕಚೇರಿಗಳಿಂದ ನೇರ ಮೇಲ್ವಿಚಾರಣೆ ಮಾಡಲಾಗುತ್ತದೆ.

ಪ್ರಶ್ನೆಪತ್ರಿಕೆಗಳ ಸಾಗಾಟ ಮತ್ತು ಟ್ರೆಷರಿ ಕೇಂದ್ರಗಳಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಪರೀಕ್ಷಾ ಕೇಂದ್ರದ ಒಳಗೆ ಸಿಬ್ಬಂದಿ ಸೇರಿದಂತೆ ಯಾರಿಗೂ ಮೊಬೈಲ್ ಫೋನ್ ಕೊಂಡೊಯ್ಯಲು ಅವಕಾಶವಿಲ್ಲ. ಡಿಜಿಟಲ್ ಸಾಧನಗಳ ಬಳಕೆಯ ಮೇಲೆ ಕಟ್ಟುನಿಟ್ಟಿನ ನಿಗಾವಹಿಸಲಾಗಿದೆ.

ವಿದ್ಯಾರ್ಥಿಗಳು ಆತಂಕವಿಲ್ಲದೆ ಪರೀಕ್ಷೆ ಎದುರಿಸಲು ಎಲ್ಲಾ ಮೂಲಸೌಕರ್ಯಗಳನ್ನು, ವಿಶೇಷವಾಗಿ ಕುಡಿಯುವ ನೀರು ಮತ್ತು ಶೌಚಾಲಯ ಸೌಲಭ್ಯಗಳನ್ನು ಖಚಿತಪಡಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್, ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್, ಯೋಜನಾ ನಿರ್ದೇಶಕಿ ವಿದ್ಯಾಕುಮಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಭರತ್ ಎಸ್., ಹಾಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಪ್ರಕಾಶ್ ಜಿ.ಟಿ. ನಿಟ್ಟಾಲಿ ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande