ಫೆ.20 ರಂದು ಸಂತ ಕವಿ ಸರ್ವಜ್ಞ ಜಯಂತಿ
ವಿಜಯಪುರ, 17 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಪೆ.20 ರಂದು ಬೆಳಿಗ್ಗೆ 10.30ಕ್ಕೆ ನಗರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ಕಾರ್ಯಕ್ರಮವನ್ನು
ಫೆ.20 ರಂದು ಸಂತ ಕವಿ ಸರ್ವಜ್ಞ ಜಯಂತಿ


ವಿಜಯಪುರ, 17 ಫೆಬ್ರವರಿ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಪೆ.20 ರಂದು ಬೆಳಿಗ್ಗೆ 10.30ಕ್ಕೆ ನಗರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 9:30ಕ್ಕೆ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದವರೆಗೆ ಭಾವಚಿತ್ರದ ಮೆರವಣಿಗೆ ನಡೆಯಲಿದೆ.

ಈ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು.

ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ–2 ಹಾಗೂ ಶಾಸಕರಾದ ಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ, ಸಂಸದರಾದ ರಮೇಶ ಜಗಜಿಣಗಿ ಹಾಗೂ ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು‌ ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಸಂಗಪ್ಪ ಕುಂಬಾರ ಅವರು ವಿಶೇಷ ಉಪನ್ಯಾಸ ನೀಡಲಿದ್ದು, ಶ್ರೀಮತಿ ಮಂಜುಳಾ ಹಿಪ್ಪರಗಿ ಅವರು ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande