ಫೆ.19ರಂದು ಛತ್ರಪತಿ ಶಿವಾಜಿ ಮಹಾರಾಜ ಜಯಂತಿ
ಚಿತ್ರದುರ್ಗ, 17 ಫೆಬ್ರವರಿ (ಹಿ.ಸ.): ಆ್ಯಂಕರ್: ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಸಮಾರಂಭ
ಫೆ.19ರಂದು ಛತ್ರಪತಿ ಶಿವಾಜಿ ಮಹಾರಾಜ ಜಯಂತಿ


ಚಿತ್ರದುರ್ಗ, 17 ಫೆಬ್ರವರಿ (ಹಿ.ಸ.):

ಆ್ಯಂಕರ್:

ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಸಮಾರಂಭವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಉದ್ಘಾಟಿಸಲಿದ್ದು, ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ.

ತುರುವನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಕೃಷ್ಣಪ್ಪ ಉಪನ್ಯಾಸ ನೀಡಲಿದ್ದು, ಚಿತ್ರದುರ್ಗದ ರಂಗನಿರ್ದೇಶಕ ಕೆ.ಪಿ.ಎಂ. ಗಣೇಶಯ್ಯ ಮತ್ತು ತಂಡದಿಂದ ಗೀತಗಾಯನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande