ವಿಬಿಜಿ ರಾಮಜೀ ಜಾಗೃತಿ ಅಭಿಯಾನ
ನರಗುಂದ, 17 ಫೆಬ್ರವರಿ (ಹಿ.ಸ.): ಆ್ಯಂಕರ್: ವಿಕಸಿತ ಭಾರತದ ಸಾಕಾರದ ನಿಟ್ಟಿನಲ್ಲಿ ವಿಬಿ-ಜಿ ರಾಮ್ ಜಿ ಕಾನೂನಿನ ಬಗ್ಗೆ ಜನರಿಗೆ ಸ್ಪಷ ಮಾಹಿತಿ ನೀಡಲು ಇಂದು ನರಗುಂದ ವಿಧಾನಸಭಾ ಕ್ಷೇತ್ರದ ಹೊಳೆಆಲೂರು ಮಂಡಲ ಹೊಳೆಆಲೂರು ಗ್ರಾಮದಲ್ಲಿಂದು ಭಾರತೀಯ ಜನತಾ ಪಕ್ಷದ ವತಿಯಿಂದ ಜನಜಾಗೃತಿ ಅಭಿಯಾನ ನಡೆಸಲಾಯಿತು
VBG Ramji Awareness Campaign


ನರಗುಂದ, 17 ಫೆಬ್ರವರಿ (ಹಿ.ಸ.):

ಆ್ಯಂಕರ್:

ವಿಕಸಿತ ಭಾರತದ ಸಾಕಾರದ ನಿಟ್ಟಿನಲ್ಲಿ ವಿಬಿ-ಜಿ ರಾಮ್ ಜಿ ಕಾನೂನಿನ ಬಗ್ಗೆ ಜನರಿಗೆ ಸ್ಪಷ ಮಾಹಿತಿ ನೀಡಲು ಇಂದು ನರಗುಂದ ವಿಧಾನಸಭಾ ಕ್ಷೇತ್ರದ ಹೊಳೆಆಲೂರು ಮಂಡಲ ಹೊಳೆಆಲೂರು ಗ್ರಾಮದಲ್ಲಿಂದು ಭಾರತೀಯ ಜನತಾ ಪಕ್ಷದ ವತಿಯಿಂದ ಜನಜಾಗೃತಿ ಅಭಿಯಾನ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಸಿ.ಪಾಟೀಲ ವಿಬಿಜಿ ರಾಮಜೀ ಯೋಜನೆಯ ಉದ್ದೇಶ, ಮಹತ್ವ ಹಾಗೂ ರಾಜ್ಯ ಮತ್ತು ಗ್ರಾಮೀಣ ಮಟ್ಟದಲ್ಲಿ ಅದರ ಪರಿಣಾಮಕಾರಿ ಅನುಷ್ಠಾನ ಕುರಿತು ಮಾಹಿತಿ ನೀಡಿದರು. ಈ ಯೋಜನೆಯಡಿ ಕಾರ್ಮಿಕ ದಿನಗಳನ್ನು 100ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದ್ದು, ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಕೆಯ ಮೂಲಕ ಪಾರದರ್ಶಕತೆ ಹೆಚ್ಚಿಸಿ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ತಡೆಯುವ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.

ಅಲ್ಲದೆ ಕಾರ್ಮಿಕರಿಗೆ ಹೆಚ್ಚಿನ ಭದ್ರತೆ ಒದಗಿಸುವುದರ ಜೊತೆಗೆ, ವೇತನವನ್ನು ಸಮಯಕ್ಕೆ ಸರಿಯಾಗಿ ಪಾವತಿಸುವ ಸುಸೂತ್ರ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande