ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ: ನೋಂದಣಿ ಆರಂಭ
ಚಿತ್ರದುರ್ಗ, 17 ಫೆಬ್ರವರಿ (ಹಿ.ಸ.): ಆ್ಯಂಕರ್:ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಕೆಎಸ್‌ಸಿಎಂಎಫ್) ವತಿಯಿಂದ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜಿಲ್ಲೆಯ ರೈತರಿಂದ ಕಡಲೆಕಾಳು ಖರೀದಿಸಲು ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕೆಎಸ್‌ಸಿಎಂಎಫ್ ಚಿತ್ರದುರ್ಗ ಶಾಖಾ ವ್ಯವಸ್ಥಾ
ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ: ನೋಂದಣಿ ಆರಂಭ


ಚಿತ್ರದುರ್ಗ, 17 ಫೆಬ್ರವರಿ (ಹಿ.ಸ.):

ಆ್ಯಂಕರ್:ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಕೆಎಸ್‌ಸಿಎಂಎಫ್) ವತಿಯಿಂದ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜಿಲ್ಲೆಯ ರೈತರಿಂದ ಕಡಲೆಕಾಳು ಖರೀದಿಸಲು ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕೆಎಸ್‌ಸಿಎಂಎಫ್ ಚಿತ್ರದುರ್ಗ ಶಾಖಾ ವ್ಯವಸ್ಥಾಪಕ ಬಸವೇಶ ತಿಳಿಸಿದ್ದಾರೆ.

ನಾಫೇಡ್ ಸಹಯೋಗದಲ್ಲಿ ಖರೀದಿ ನಡೆಯಲಿದ್ದು, ರೈತರು ಆಧಾರ್ ಕಾರ್ಡ್ ಆಧಾರಿತ ಬಯೋಮೆಟ್ರಿಕ್ ವಿಧಾನದಲ್ಲಿ ನಿಗದಿತ ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಸರ್ಕಾರದ ಆದೇಶದಂತೆ ಪ್ರತಿ ಕ್ವಿಂಟಾಲ್‌ಗೆ ರೂ.5,875 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್ ಹಾಗೂ ಒಟ್ಟು 40 ಕ್ವಿಂಟಾಲ್‌ವರೆಗೆ ಖರೀದಿ ಮಾಡಲು ಜಿಲ್ಲಾ ಟಾಸ್ಕ್‌ಫೋರ್ಸ್ ನಿರ್ಧರಿಸಿದೆ.

ರೈತರು ಸಮೀಪದ ಖರೀದಿ ಕೇಂದ್ರವನ್ನು ಸಂಪರ್ಕಿಸಿ ನೋಂದಣಿ ಮಾಡಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande