ಯುವಜನತೆ ಸ್ವಾವಲಂಬಿಯಾಗಲು ಶಿವಣ್ಣ ಗಂಜಿಗಟ್ಟೆ ಕರೆ
ಚಿತ್ರದುರ್ಗ, 17 ಫೆಬ್ರವರಿ (ಹಿ.ಸ.): ಆ್ಯಂಕರ್: ನಿರುದ್ಯೋಗ ಭತ್ಯೆ ಪಡೆಯುವುದಷ್ಟೇ ಗುರಿಯಾಗದೆ, ಯುವಕರು ಕೌಶಲ್ಯ ತರಬೇತಿ ಪಡೆದು ಉದ್ಯೋಗ ಹೊಂದಿ ಸ್ವಾವಲಂಬಿಗಳಾಗಬೇಕು ಎಂದು ಚಿತ್ರದುರ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ ಆರ್. ಗಂಜಿಗಟ್ಟೆ ಹೇಳಿದರು. ನಗರದ ಸ
Program


ಚಿತ್ರದುರ್ಗ, 17 ಫೆಬ್ರವರಿ (ಹಿ.ಸ.):

ಆ್ಯಂಕರ್:

ನಿರುದ್ಯೋಗ ಭತ್ಯೆ ಪಡೆಯುವುದಷ್ಟೇ ಗುರಿಯಾಗದೆ, ಯುವಕರು ಕೌಶಲ್ಯ ತರಬೇತಿ ಪಡೆದು ಉದ್ಯೋಗ ಹೊಂದಿ ಸ್ವಾವಲಂಬಿಗಳಾಗಬೇಕು ಎಂದು ಚಿತ್ರದುರ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ ಆರ್. ಗಂಜಿಗಟ್ಟೆ ಹೇಳಿದರು.

ನಗರದ ಸರ್ಕಾರಿ ವಿಜ್ಞಾನ ಕಾಲೇಜು ಸಭಾಂಗಣದಲ್ಲಿ ಯುವನಿಧಿ ಫಲಾನುಭವಿಗಳಿಗೆ ಆಯೋಜಿಸಿದ್ದ ಕೌಶಲ್ಯ ತರಬೇತಿ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲೊಂದಾದ ಯುವನಿಧಿ ಯೋಜನೆ ಪದವೀಧರರಿಗೆ ರೂ.3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ರೂ.1,500 ಭತ್ಯೆ ನೀಡುವ ಮೂಲಕ ಆರ್ಥಿಕ ಬೆಂಬಲ ಒದಗಿಸುತ್ತಿದೆ ಎಂದರು. ಆದರೆ ಕೇವಲ ಭತ್ಯೆ ನೀಡುವುದು ಸರ್ಕಾರದ ಉದ್ದೇಶವಲ್ಲ; ಯುವಕರು ತಮ್ಮ ಕೌಶಲ್ಯ ಹೆಚ್ಚಿಸಿಕೊಂಡು ಉತ್ತಮ ಉದ್ಯೋಗ ಪಡೆಯಬೇಕು ಎಂಬುದೇ ಯೋಜನೆಯ ಆಶಯ ಎಂದು ತಿಳಿಸಿದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಣ್ಣಕ್ಕಿ ಮಾರುತಿ ಮಾತನಾಡಿ, ಜಿಟಿಟಿಸಿ ಮತ್ತು ಐಟಿಐ ಸಂಸ್ಥೆಗಳ ಮೂಲಕ ಉಚಿತ ತರಬೇತಿ ನೀಡಿ ಶೇ.70ರಷ್ಟು ಉದ್ಯೋಗಾವಕಾಶ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದರು. ಯುವಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಗೌರವಯುತ ಜೀವನ ಕಟ್ಟಿಕೊಳ್ಳಬೇಕು ಎಂದು ಕರೆ ನೀಡಿದರು.

ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕ ತೋಟಪ್ಪ ಮಾತನಾಡಿ, ಪ್ರಾಯೋಗಿಕ ತಾಂತ್ರಿಕ ಕೌಶಲ್ಯಗಳ ಅವಶ್ಯಕತೆಯನ್ನು ಒತ್ತಿ ಹೇಳಿದರು. ಮೆಕಾನಿಕಲ್, ಆಟೊಮೇಷನ್, ಎಲೆಕ್ಟ್ರಾನಿಕ್ಸ್ ಸೇರಿದಂತೆ ವಿವಿಧ ಕೋರ್ಸ್‌ಗಳಲ್ಲಿ 2 ತಿಂಗಳಿಂದ 1 ವರ್ಷದವರೆಗೆ ತರಬೇತಿ ಲಭ್ಯವಿದ್ದು, ವಿಶೇಷವಾಗಿ ಎಸ್‌ಸಿ, ಎಸ್‌ಟಿ ಹಾಗೂ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದೆ. ತರಬೇತಿ ಪೂರ್ಣಗೊಳಿಸಿದವರಿಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಬ್ಯಾಂಕ್ ಪ್ರತಿನಿಧಿಗಳು, ಕಾಲೇಜು ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande