ಇಂಡಿಯನ್ ಮಿಲಿಟರಿ : 8ನೇ ತರಗತಿಗೆ ಪ್ರವೇಶ ಪರೀಕ್ಷೆ
ಬಳ್ಳಾರಿ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜನವರಿ 2027ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟಿಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇ
ಇಂಡಿಯನ್ ಮಿಲಿಟರಿ : 8ನೇ ತರಗತಿಗೆ ಪ್ರವೇಶ ಪರೀಕ್ಷೆ


ಬಳ್ಳಾರಿ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಜನವರಿ 2027ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟಿಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಬರುವ ಜೂನ್ 07 ರಂದು ನಡೆಸಲಾಗುವುದು.

ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ 01-01-2027ರಂತೆ 11 ವರೆ ವರ್ಷದಿಂದ 13 ವರ್ಷದೊಳಗಿರುವ (ಅಂದರೆ ದಿನಾಂಕ 02-01-2014 ರಿಂದ 01-07-2015ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.

ಈ ಸಂಸ್ಥೆಯ ಮುಖ್ಯ ಗುರಿ ಯುವಕ ಮತ್ತು ಯುವತಿಯರನ್ನು ದೇಶದ ಸಶಸ್ತ ಪಡೆಗೆ ಸೇರಲು ಸಿದ್ಧಗೊಳಿಸುವುದು ಹಾಗೂ ಈ ನಿಟ್ಟಿನಲ್ಲಿ ಯುವಕ ಮತ್ತು ಯುವತಿಯರಿಗೆ ಸರ್ವರೀತಿಯ ವಿದ್ಯಾಭ್ಯಾಸ, ತರಬೇತಿ ನೀಡಲಾಗುತ್ತದೆ.

ಕಾಲೇಜಿನಲ್ಲಿ ವರ್ಷವೊಂದಕ್ಕೆ ಪ್ರಸಕ್ತ ವಿದ್ಯಾಭ್ಯಾಸ ಶುಲ್ಕ ರೂ.98,650 (ಸಾಮಾನ್ಯ ವರ್ಗ) ಹಾಗೂ ರೂ.81,850 (ಎಸ್‌ಸಿ, ಎಸ್‌ಟಿ) ಗಳಾಗಿರುತ್ತದೆ. ಇದು ಕಾಲ ಕಾಲಕ್ಕೆ ಹೆಚ್ಚಾಗಬಹುದು. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ.50,000 ಭದ್ರತಾ ಠೇವಣಿ ನೀಡಬೇಕಾಗುತ್ತದೆ. ಈ ಮೊತ್ತವನ್ನು ವಿದ್ಯಾರ್ಥಿಯು ಪದವೀಧರನಾದ ಮತ್ತು ವಿದ್ಯಾರ್ಥಿನಿ ಪದವೀಧರೆಯಾದ ಬಳಿಕ ಹಿಂತಿರುಗಿಸಲಾಗುವುದು.

ಅರ್ಜಿ ನಮೂನೆಗಳನ್ನು ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕವನ್ನು ರಾಷ್ಟಿçÃಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹರಾಡೂನ್, ಉತ್ತರಾಖಂಡ್, ಪಿನ್ – 248003 ಈ ವಿಳಾಸದ ಮೂಲಕ ಪಡೆಯಬಹುದು.

ಬೇಡಿಕೆ ಹುಂಡಿ (ಡಿಡಿ) ಕಳುಹಿಸುವ ಮೂಲಕ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕವನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600 ಗಳ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ.555 ಗಳ ಬೇಡಿಕೆಯ ಹುಂಡಿಯನ್ನು ಲಿಖಿತ ವಿನಂತಿಯ ಜೊತೆಯಲ್ಲಿ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರದೊಂದಿಗೆ ಕಳುಹಿಸಬಹುದು.

“THE COMMANDANT RIMC FUND” PAYABLE AT HDFC BANK, BALLUPUR CHOWK, DEHRADUN (BANK CODE. 1399), UTTARAKHAND. ವಿಳಾಸ, ಪಿನ್ ಕೋಡ್ ಮತ್ತು ಸಂಪರ್ಕ ಸಂಖ್ಯೆಯೊ0ದಿಗೆ ದೊಡ್ಡ ಅಕ್ಷರಗಳಲ್ಲಿ ಟೈಪ್ ಮಾಡಿ ಬರೆಯಬೇಕು. ಕಾನೂನು ಬಾಹಿರ ಅಥವಾ ಅಪೂರ್ಣ ವಿಳಾಸದಿಂದ ಉಂಟಾಗುವ ಪ್ರಾಸ್ಪೆಕ್ಟಸ್‌ನ ಸಾಗಾಣಿಕೆಯಲ್ಲಿ ಯಾವುದೇ ಅಂಚೆ ವಿಳಂಬ ಅಥವಾ ನಷ್ಟಕ್ಕೆ RIMC ಸಂಸ್ಥೆಯು ಜವಾಬ್ದಾರರಾಗಿರುವುದಿಲ್ಲ.

ಆರ್.ಐ.ಎಮ್.ಸಿ ಜಾಲತಾಣದಲ್ಲಿ ರೂ.600 (ಸಾಮಾನ್ಯ ಅಭ್ಯರ್ಥಿಗಳಿಗೆ), ಮತ್ತು ರೂ.555 (ಎಸ್ ಸಿ/ಎಸ್.ಟಿ ಅಭ್ಯರ್ಥಿಗಳಿಗೆ) ಪಾವತಿಸಿ ಪ್ರಾಸ್ಪೆಕ್ಟಸ್ ಮತ್ತು ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕವನ್ನು ಪಡೆಯಬಹುದು. (ಹಣ ಪಾವತಿಯಾದ ನಂತರ ಪ್ರಾಸ್ಪೆಕ್ಟಸ್ ಮತ್ತು ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕವನ್ನು ರಿಜಿಸ್ಟರ್ಡ್ ಅಂಚೆ ಮುಖಾಂತರ ತಲುಪಿಸಲಾಗುತ್ತದೆ.

ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಕೆಳಗಿನ ಅಡಕಗಳೊಂದಿಗೆ ಏ.05 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ಭವನ್, ನಂ.58 ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು- 25, ಇವರಿಗೆ ಸಲ್ಲಿಸತಕ್ಕದ್ದು.

ಮುನ್ಸಿಪಾಲಿಟಿ, ಗ್ರಾಮ ಪಂಚಾಯತ್ ಪ್ರಾಧಿಕಾರ ವತಿಯಿಂದ ಆಂಗ್ಲ ಭಾಷೆಯಲ್ಲಿ ಪಡೆದ ಅಭ್ಯರ್ಥಿಯ ಜನ್ಮ ಪ್ರಮಾಣ ಪತ್ರದ ಧೃಢೀಕೃತ ಪ್ರತಿ. 4 ಪಾಸ್‌ಪೋರ್ಟ್ ಸೈಜಿನ ಭಾವಚಿತ್ರಗಳು (ಅರ್ಜಿಗಳಲ್ಲಿ ಅಂಟಿಸಿದ ಭಾವಚಿತ್ರವನ್ನು ಸೇರಿಸಿ).

ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಾಗಿದ್ದಲ್ಲಿ, ಸಕ್ಷಮ ಪ್ರಾಧಿಕಾರದಿಂದ ನೀಡಿದ ಜಾತಿ ಪ್ರಮಾಣ ಪತ್ರದ ಧೃಢೀಕೃತ ಪ್ರತಿ (ಆಂಗ್ಲ ಭಾಷೆಯಲ್ಲಿ ಇರುವಂತೆ ಮಾತ್ರ). ಪರೀಕ್ಷಾ ಪ್ರವೇಶ ಪತ್ರವನ್ನು ತ್ವರಿತ ಅಂಚೆದ್ವಾರ ರವಾನಿಸಲು ಹೊರ ಜಿಲ್ಲೆಗೆ ರೂ.56 ಹಾಗೂ ಬೆಂಗಳೂರು ನಗರ ವ್ಯಾಪ್ತಿಗೆ ರೂ.23 ಅಂಚೆ ಚೀಟಿ ಅಂಟಿಸಿದ ಸ್ವವಿಳಾಸ ಲಕೋಟೆ.

ಶಾಲಾ ಪ್ರಾಚಾರ್ಯರು, ಮುಖ್ಯೋಪಾಧ್ಯಾಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಓದುತ್ತಿರುವ ತರಗತಿ ಬಗ್ಗೆ ಪಡೆದ ಪ್ರಮಾಣ ಪತ್ರದ ಮೂಲ ಪ್ರತಿ (ಧೃಢೀಕರಿಸಿದ ಅಭ್ಯರ್ಥಿಯ ಭಾವಚಿತ್ರದೊಂದಿಗೆ). ಕರ್ನಾಟಕ ರಾಜ್ಯದ ಮೂಲ ವಾಸಸ್ಥಾನ ಧೃಡೀಕರಣ ಪತ್ರ (ತಹಸೀಲ್ದಾರರಿಂದ) (ಇಂಗ್ಲೀಷ್ ನಲ್ಲಿ ಇರತಕ್ಕದ್ದು), ಆಧಾರ್ ಕಾರ್ಡ್ ಪ್ರತಿ(ಕಡ್ಡಾಯ).

ಹೆಚ್ಚಿನ ಮಾಹಿತಿಗಾಗಿ ದೂ.080-25589459 ಅಥವಾ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಧಾರವಾಡ ಕಾರ್ಯಾಲಯ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande