
ಬೆಂಗಳೂರು, 18 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿಗಳ ನಿವಾಸದಲ್ಲಿ ಇಂದು ನಡೆದ ವಿವಿಧ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಪಾಲ್ಗೊಂಡು, ಕಳೆದ ಎರಡುವರೆ ವರ್ಷಗಳ ಕೃಷಿ ಇಲಾಖೆಯ ಪ್ರಗತಿ ಹಾಗೂ ಸಾಧನೆಗಳ ಕುರಿತು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಮುಂದಿನ ಹಣಕಾಸು ವರ್ಷಕ್ಕೆ ಸಂಬಂಧಿಸಿದ ಬೇಡಿಕೆಗಳು ಮತ್ತು ಆದ್ಯತೆಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.
ಇದೇ ಸಂದರ್ಭದಲ್ಲಿ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ.30,34,78,500 ಮೊತ್ತದ ಲಾಭಾಂಶವನ್ನು ಹಸ್ತಾಂತರಿಸಲಾಯಿತು.
ಸಭೆಯಲ್ಲಿ ಸಚಿವರಾದ ವೆಂಕಟೇಶ್, ಕೃಷ್ಣಬೈರೇಗೌಡ ಹಾಗೂ ನಿಗಮದ ಅಧ್ಯಕ್ಷೆ ಕನೀಜ್ ಫಾತಿಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa