
ಬೆಂಗಳೂರು, 18 ಫೆಬ್ರವರಿ (ಹಿ.ಸ.) :
ಆ್ಯಂಕರ್ : 880 ಕೋಟಿ ಮೌಲ್ಯದ 890 ವಿವಿಧ ಔಷಧಗಳನ್ನು ಖರೀದಿಸಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು ಏಳು ತಿಂಗಳು ಕಳೆದರೂ ಖರೀದಿ ಪ್ರಕ್ರಿಯೆ ಆರಂಭವಾಗಿಲ್ಲ ಎಂದು ಆರೋಪಿಸಿ ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯೆ ನೀಡಿದ ಅವರು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, “ಕೆಲಸ ಮಾಡಲು ಆಗದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಿ; ಬಡವರ ಜೀವದ ಜೊತೆ ಚೆಲ್ಲಾಟ ಆಡುವುದು ಸರಿಯಲ್ಲ” ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ಮಾತನಾಡಿದ ಅಶೋಕ್, “ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ತಕ್ಷಣವೇ ಆರೋಗ್ಯ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa