ಸರಕಾರದ ವಿರುದ್ಧ ಅಶೋಕ ವಾಗ್ದಾಳಿ
ಬೆಂಗಳೂರು, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್, ಆಡಳಿತ ವ್ಯವಸ್ಥೆಯಲ್ಲಿ ಸಂಪೂರ್ಣ ಅಸ್ಥಿರತೆ ಉಂಟಾಗಿದೆ ಎಂದು ಆರೋಪಿಸಿದ್ದಾರೆ. “ಮುಖ್ಯಮಂತ್ರಿಗಳಿಗೆ ಸಚಿವರ ಮೇಲೆ ಹಿಡಿತವಿಲ್ಲ, ಕೆಪಿಸಿಸಿ ಅಧ್ಯಕ್ಷರಿಗೆ
Ashok


ಬೆಂಗಳೂರು, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್, ಆಡಳಿತ ವ್ಯವಸ್ಥೆಯಲ್ಲಿ ಸಂಪೂರ್ಣ ಅಸ್ಥಿರತೆ ಉಂಟಾಗಿದೆ ಎಂದು ಆರೋಪಿಸಿದ್ದಾರೆ.

“ಮುಖ್ಯಮಂತ್ರಿಗಳಿಗೆ ಸಚಿವರ ಮೇಲೆ ಹಿಡಿತವಿಲ್ಲ, ಕೆಪಿಸಿಸಿ ಅಧ್ಯಕ್ಷರಿಗೆ ಶಾಸಕರ ಮೇಲೆ ಹಿಡಿತವಿಲ್ಲ, ಸಚಿವರಿಗೆ ಅಧಿಕಾರಿಗಳ ಮೇಲೆ ಹಿಡಿತವಿಲ್ಲ. ಒಟ್ಟಿನಲ್ಲಿ ಈ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಕನ್ನಡಿಗರಿಗೆ ನೆಮ್ಮದಿ ಸಿಗುವುದಿಲ್ಲ” ಎಂದು ಅವರು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಆಡಳಿತ ಸಮನ್ವಯದ ಕೊರತೆ ಹಾಗೂ ನಿರ್ಧಾರಗಳಲ್ಲಿ ಗೊಂದಲ ಉಂಟಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರ ಜನಾಭಿವೃದ್ಧಿಯ ಬದಲು ಒಳಜಗಳಗಳಲ್ಲಿ ತೊಡಗಿಕೊಂಡಿದೆ ಎಂದು ಟೀಕಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande