
ಬಳ್ಳಾರಿ, 18 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಜಿಲ್ಲಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಆನ್‍ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ)ದ ಜಿಲ್ಲಾ ವ್ಯವಸ್ಥಾಪಕ ಭಾವಿಕಟ್ಟೆ ಅವರು ತಿಳಿಸಿದ್ದಾರೆ.
ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ.
ನಿಗಮದಿಂದ ವಾಹನ ಖರೀದಿಗೆ ರೂ.03 ಲಕ್ಷಗಳ ಸಹಾಯಧನ ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ.
ಬಳ್ಳಾರಿ ನಗರ ಕ್ಷೇತ್ರದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-(2ಎ) ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.03 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಒಳಗಿರಬೇಕು.
ಈ ಮೇಲ್ಕಂಡ ಎಲ್ಲಾ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ-ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗಲಿದೆ.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಹಾಗೂ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮಾ.03 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ನೂತನ ಜಿಲ್ಲಾಡಳಿತ ಭವನ, ಬಿ-ಬ್ಲಾಕ್, 2ನೇ ಮಹಡಿ, ಕೊಠಡಿ ಸಂ.53, ಅನಂತಪುರ ರಸ್ತೆ, ಬಳ್ಳಾರಿ ಅಥವಾ ದೂ.08392-267038 ಗೆ ಸಂಪರ್ಕಿಸಬಹುದು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು ಮೊ.8050770004, 8050770005 ಗೆ ಸಂಪರ್ಕಿಸಬಹುದು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್