ಬಳ್ಳಾರಿ ಬಾಲಕ ಕಾಣೆ
ಬಳ್ಳಾರಿ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ನಗರದಲ್ಲಿ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿ.ಪ್ರವೀಣ್ ಕುಮಾರ್( 16) ಫೆ.12 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5 ಅಡಿ, ದುಂಡು
Bellary: Boy missing


ಬಳ್ಳಾರಿ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ನಗರದಲ್ಲಿ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿ.ಪ್ರವೀಣ್ ಕುಮಾರ್( 16) ಫೆ.12 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.

ಚಹರೆ ಗುರುತು:

ಎತ್ತರ 5 ಅಡಿ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಗದ್ದ ಕೆಳಗೆ ಹಳೆ ಗಾಯದ ಗುರುತು ಇರುತ್ತದೆ. ಕನ್ನಡ, ತೆಲುಗು, ಹಿಂದಿ ಮತ್ತು ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ.

ಕಾಣೆಯಾದ ಸಂದರ್ಭದಲ್ಲಿ ಮೆರುನ್ ಬಣ್ಣದ ಟಿ-ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.

ಬಾಲಕನ ಬಗ್ಗೆ ಮಾಹಿತಿ ದೊರೆತಲ್ಲಿ ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192, ಪಿಐ ಮೊ.9480803046, ಪಿಎಸ್‍ಐ ಮೊ.9480803082 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande