ಶ್ರೀನಗರದಲ್ಲಿ ಭಯೋತ್ಪಾದಕರ ಸಂಚು ವಿಫಲಗೊಳಿಸಿದ ಭದ್ರತಾ ಪಡೆ
ಶ್ರೀನಗರ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಶ್ರೀನಗರ–ಬಾರಾಮುಲ್ಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಭಯೋತ್ಪಾದಕರು ಇಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ)ವನ್ನು ಭದ್ರತಾ ಪಡೆಗಳು ಸಕಾಲದಲ್ಲಿ ನಿಷ್ಕ್ರಿಯಗೊಳಿಸಿ ಸಂಭವನೀಯ ಭಾರೀ ಅನಾಹುತವನ್ನು ತಪ್ಪಿಸಿವೆ. ಅಧಿಕಾ
Ied


ಶ್ರೀನಗರ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಶ್ರೀನಗರ–ಬಾರಾಮುಲ್ಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಭಯೋತ್ಪಾದಕರು ಇಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ)ವನ್ನು ಭದ್ರತಾ ಪಡೆಗಳು ಸಕಾಲದಲ್ಲಿ ನಿಷ್ಕ್ರಿಯಗೊಳಿಸಿ ಸಂಭವನೀಯ ಭಾರೀ ಅನಾಹುತವನ್ನು ತಪ್ಪಿಸಿವೆ.

ಅಧಿಕಾರಿಗಳ ಮಾಹಿತಿಯಂತೆ, ಬೆಳಿಗ್ಗೆ ಸುಮಾರು 7 ಗಂಟೆಯ ವೇಳೆಗೆ ನರ್ಬಲ್ ಸಮೀಪ ಹೆದ್ದಾರಿಯ ಬದಿಯಲ್ಲಿ ಅನುಮಾನಾಸ್ಪದವಾಗಿ ಬ್ರೀಫ್‌ಕೇಸ್ ಬಿದ್ದಿರುವುದು ಗಮನಕ್ಕೆ ಬಂದಿದೆ. ತಕ್ಷಣವೇ ಎಚ್ಚರಗೊಂಡ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದವು.

ಬಾಂಬ್ ನಿಷ್ಕ್ರಿಯ ದಳವನ್ನು ಸ್ಥಳಕ್ಕೆ ಕರೆಸಿ, ಪ್ರದೇಶವನ್ನು ಸಂಪೂರ್ಣವಾಗಿ ಸುರಕ್ಷಿತಗೊಳಿಸಿದ ಬಳಿಕ ಐಇಡಿಯನ್ನು ಯಾವುದೇ ಸಾವುನೋವುಗಳಿಲ್ಲದೆ ನಿಷ್ಕ್ರಿಯಗೊಳಿಸಲಾಯಿತು. ಅಧಿಕಾರಿಗಳ ತ್ವರಿತ ಕ್ರಮದಿಂದ ಪ್ರಯಾಣಿಕರು ಮತ್ತು ಸ್ಥಳೀಯರು ಸಂಭವನೀಯ ಅಪಾಯದಿಂದ ಪಾರಾದರು.

ಸ್ವಲ್ಪ ಸಮಯದ ನಂತರ ಹೆದ್ದಾರಿಯಲ್ಲಿ ಸಂಚಾರವನ್ನು ಪುನಃ ಆರಂಭಿಸಲಾಯಿತು. ಸ್ಫೋಟಕ ಸಾಧನವನ್ನು ಯಾರು ಮತ್ತು ಯಾವ ಉದ್ದೇಶಕ್ಕಾಗಿ ಇಟ್ಟಿದ್ದಾರೆ ಎಂಬುದರ ಕುರಿತು ತನಿಖೆ ಮುಂದುವರಿದಿದೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಭದ್ರತಾ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ. ಕಣಿವೆ ಪ್ರದೇಶದಲ್ಲಿ ಕಾಲಕಾಲಕ್ಕೆ ಇಂತಹ ಭಯೋತ್ಪಾದಕ ಪಿತೂರಿಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆ, ಭದ್ರತಾ ಪಡೆಗಳು ಹೆಚ್ಚಿನ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸುತ್ತಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande