
ಕೊಪ್ಪಳ, 18 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಕರ್ನಾಟಕ-1 ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಜಿಲ್ಲೆಯ ನಾಲ್ಕು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದೆ.
ಜಿಲ್ಲೆಯ ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತಿ, ಕೊಪ್ಪಳ ನಗರಸಭೆ, ಕುಕನೂರು ಪಟ್ಟಣ ಪಂಚಾಯತಿ ಹಾಗೂ ಕುಷ್ಟಗಿ ತಾಲ್ಲೂಕಿನ ತಾವರಗೇರಾ ಪಟ್ಟಣ ಪಂಚಾಯತಿಯಲ್ಲಿ ತಲಾ ಒಂದು ಕರ್ನಾಟಕ-1 ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ಆದ್ದರಿಂದ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಆಯಾ ಸ್ಥಳೀಯ ಸಂಸ್ಥೆಗಳಲ್ಲಿನ ಆಸಕ್ತರು ಮಾರ್ಚ್ 2 ರೊಳಗೆ ಆನ್‍ಲೈನ್ ಮೂಲಕ https://www.karnatakaone.gov.in/public/FranchiseeTerms ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್