ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗೆ ಪ್ರವೇಶ ಪರೀಕ್ಷೆ ; ಅರ್ಜಿ ಆಹ್ವಾನ
ಕೊಪ್ಪಳ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜನವರಿ 2027ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ
ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗೆ ಪ್ರವೇಶ ಪರೀಕ್ಷೆ ; ಅರ್ಜಿ ಆಹ್ವಾನ


ಕೊಪ್ಪಳ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಜನವರಿ 2027ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 7 2026(ಭಾನುವಾರ) ರಂದು ನಡೆಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ 2027ರ ಜನವರಿ 1 ರಂತೆ ಹನ್ನೊಂದೂವರೆ ವರ್ಷದಿಂದ 13 ವರ್ಷದೊಳಗಿರುವ (ಅಂದರೆ ದಿನಾಂಕ: 2-1-2014 ರಿಂದ 1-7-2015 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಈ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.

ಅರ್ಜಿ ನಮೂನೆ, ಪ್ರಾಸ್ಪೆಕ್ಟಸ್ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ, ಉತ್ತರಾಖಂಡ್, ಪಿನ್-248003 ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಏಪ್ರಿಲ್ 5 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ್, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು-25 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕರ ಕಾರ್ಯಾಲಯ ಅಥವಾ ದೂರವಾಣಿ ಸಂಖ್ಯೆ : 080-25589459 ಗೆ ಸಂಪರ್ಕಿಸಬಹುದು ಎಂದು ಬಾಗಲಕೋಟೆಯ ನವನಗರದ ಸೈನಿಕ ಕಲ್ಯಾಣ ಮತ್ತು ಪುನರ್ವವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande