ಬಾಂಗ್ಲಾದೇಶದ ನೂತನ ವಿದೇಶಾಂಗ ಸಚಿವರಿಗೆ ಜೈಶಂಕರ್ ಅಭಿನಂದನೆ
ನವದೆಹಲಿ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಾಂಗ್ಲಾದೇಶದ ವಿದೇಶಾಂಗ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ.ಕಲಿಲೂರ ರೇಹಮಾನ್ ಅವರಿಗೆ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಹಂಚಿಕೊಂಡ ಜೈಶಂಕರ್, ಪರಸ್ಪರ ಪ್ರಗತಿ ಮತ್ತು ಸಮೃದ್ಧ
Jaishankar


ನವದೆಹಲಿ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಬಾಂಗ್ಲಾದೇಶದ ವಿದೇಶಾಂಗ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ.ಕಲಿಲೂರ ರೇಹಮಾನ್ ಅವರಿಗೆ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅಭಿನಂದನೆ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಹಂಚಿಕೊಂಡ ಜೈಶಂಕರ್, ಪರಸ್ಪರ ಪ್ರಗತಿ ಮತ್ತು ಸಮೃದ್ಧಿಗಾಗಿ ಭಾರತ–ಬಾಂಗ್ಲಾದೇಶ ದ್ವಿಪಕ್ಷೀಯ ಸಹಕಾರವನ್ನು ಇನ್ನಷ್ಟು ಬಲಪಡಿಸಲು ಒಟ್ಟಾಗಿ ಕೆಲಸ ಮಾಡುವ ನಿರೀಕ್ಷೆಯನ್ನು ವ್ಯಕ್ತಪಡಿಸಿದರು. ಸಾಂಪ್ರದಾಯಿಕವಾಗಿ ನಿಕಟ ಸಂಬಂಧಗಳನ್ನು ಹೊಂದಿರುವ ಉಭಯ ದೇಶಗಳ ಸ್ನೇಹವನ್ನು ಮತ್ತಷ್ಟು ಗಟ್ಟಿಗೊಳಿಸುವ ಭಾರತದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

ಇತ್ತೀಚೆಗೆ ನಡೆದ ಸಂಸತ್ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ನಾಯಕ ತಾರಿಕ್ ರೇಹಮಾನ್ ಮಂಗಳವಾರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರ ಸಚಿವ ಸಂಪುಟದ ಸದಸ್ಯರೂ ಇದೇ ಸಂದರ್ಭದಲ್ಲಿ ಪದಗ್ರಹಣ ಮಾಡಿದರು.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿಪಕ್ಷೀಯ ಸಂಬಂಧಗಳು ವ್ಯಾಪಾರ, ಸಂಪರ್ಕ, ಇಂಧನ, ಜಲವಿನಿಯೋಗ ಹಾಗೂ ಸಾಂಸ್ಕೃತಿಕ ಸಹಕಾರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ವಿಸ್ತರಿಸಿರುವ ಹಿನ್ನೆಲೆ, ಹೊಸ ಸರ್ಕಾರದ ಅವಧಿಯಲ್ಲಿ ಈ ಸಹಕಾರ ಇನ್ನಷ್ಟು ಗಟ್ಟಿಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande