
ಬೆಂಗಳೂರು, 18 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷೆಯಾದ ಜಯಮಾಲಾ ಹಾಗೂ ಮಂಡಳಿ ಸದಸ್ಯರು ಇಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಈ ವೇಳೆ ಕನ್ನಡ ಚಿತ್ರರಂಗದ ಅಭಿವೃದ್ಧಿ, ಉದ್ಯಮ ಎದುರಿಸುತ್ತಿರುವ ಸವಾಲುಗಳು ಹಾಗೂ ಭವಿಷ್ಯದ ಯೋಜನೆಗಳ ಕುರಿತು ಚರ್ಚೆ ನಡೆಯಿತು. ಕನ್ನಡ ಚಿತ್ರೋದ್ಯಮವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಉಪ ಮುಖ್ಯಮಂತ್ರಿ ಸಲಹೆ ನೀಡಿದರು.
ಮಂಡಳಿಯ ನೂತನ ಅಧ್ಯಕ್ಷೆಯಾಗಿರುವ ಜಯಮಾಲಾ ಅವರಿಗೆ ಉಪ ಮುಖ್ಯಮಂತ್ರಿ ಶುಭಾಶಯ ಕೋರಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa