ರಾಜ್ಯ ಮಾಹಿತಿ ಆಯುಕ್ತರಿಂದ ಕೊಪ್ಪಳ ಜಿಲ್ಲಾ ಪ್ರವಾಸ
ಕೊಪ್ಪಳ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ್ ಸಿಂಗ್ ಅವರು ಫೆಬ್ರವರಿ 20 ಮತ್ತು 21 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಆಯುಕ್ತರು ಫೆ.20 ರಂದು ಸಂಜೆ 7 ಗಂಟೆಗೆ ಕೊಪ್ಪಳ
ರಾಜ್ಯ ಮಾಹಿತಿ ಆಯುಕ್ತರಿಂದ ಕೊಪ್ಪಳ ಜಿಲ್ಲಾ ಪ್ರವಾಸ


ಕೊಪ್ಪಳ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ್ ಸಿಂಗ್ ಅವರು ಫೆಬ್ರವರಿ 20 ಮತ್ತು 21 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಆಯುಕ್ತರು ಫೆ.20 ರಂದು ಸಂಜೆ 7 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಕೊಪ್ಪಳದಲ್ಲಿ ವಾಸ್ತವ್ಯ ಮಾಡುವರು. ಫೆ.21 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತದಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಯೋಜಿಸಿರುವ ಮಾಹಿತಿ ಹಕ್ಕು ಕಾಯ್ದೆಯ ಕುರಿತ ಕಾರ್ಯಾಗಾರದಲ್ಲಿ ಆಯಾ ಇಲಾಖೆಯ ಅಧಿಕಾರಿ, ಸಿಬ್ಬಂದಿಯೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 1.30 ಗಂಟೆಗೆ ಪತ್ರಿಕಾ ಗೋಷ್ಠಿ ನಡೆಸುವರು. ಸಂಜೆ 4 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ ಕಲಬುರಗಿ ಕಡೆಗೆ ಪ್ರಯಾಣ ಬೆಳೆಸುವರು ಎಂದು ಆಯುಕ್ತರ ಆಪ್ತ ಸಹಾಯಕ ಶಿವಾನಂದ ಬಿರಾದಾರ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande