ಲಾರಿ–ಬೈಕ್ ಮುಖಾಮುಖಿ ಡಿಕ್ಕಿ ; ಒಂದೇ ಕುಟುಂಬದ ಮೂವರ ದುರ್ಮರಣ
ಬೆಳಗಾವಿ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಲಖನೂರ ಗ್ರಾಮದ ಹೊರವಲಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಮೃತರನ್ನು ಗಿರೇಪ್ಪಾ ಕುಂದರಾಳಿ (38), ಅವರ ಪತ್ನಿ ಮಂಜುಳಾ ಕುದ್
Accident


ಬೆಳಗಾವಿ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಲಖನೂರ ಗ್ರಾಮದ ಹೊರವಲಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಮೃತರನ್ನು ಗಿರೇಪ್ಪಾ ಕುಂದರಾಳಿ (38), ಅವರ ಪತ್ನಿ ಮಂಜುಳಾ ಕುದ್ರಾಳಿ (28) ಹಾಗೂ ಮಗಳು ಆರಾಧ್ಯಾ (7) ಎಂದು ಗುರುತಿಸಲಾಗಿದೆ. ಗಿರೇಪ್ಪಾ ಅವರು ಮಹಾರಾಷ್ಟ್ರದ ಜಯಸಿಂಗಪುರ ಪಟ್ಟಣದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು ಎಂದು ತಿಳಿದುಬಂದಿದೆ.

ಕುಟುಂಬದವರು ಬೈಕ್‌ನಲ್ಲಿ ಜಯಸಿಂಗಪುರದಿಂದ ಬಾಗಲಕೋಟ ಜಿಲ್ಲೆಯ ಜಮಖಂಡಿ ಪಟ್ಟಣದತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ಅಲಖನೂರ ಗ್ರಾಮದ ಹೊರವಲಯದ ಜಮಖಂಡಿ–ಮೀರಜ ರಾಜ್ಯ ಹೆದ್ದಾರಿಯಲ್ಲಿ ಎದುರಿಗೆ ಬಂದ ಲಾರಿ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande