ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಶಾಸಕ ಮಹೇಶ ಟೆಂಗಿನಕಾಯಿ
ಹುಬ್ಬಳ್ಳಿ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿ ನಗರದಲ್ಲಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಯ ಸ್ಥಳಕ್ಕೆ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿ, ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು. ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಗುಣಮಟ್
Inspection


ಹುಬ್ಬಳ್ಳಿ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿ ನಗರದಲ್ಲಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಯ ಸ್ಥಳಕ್ಕೆ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿ, ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಗುಣಮಟ್ಟ ಕಾಪಾಡಿಕೊಂಡು ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಲ್ಲದೆ, ಕಾಮಗಾರಿಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಪರಿಶೀಲಿಸಲು ಮುಂದಿನ ವಾರ ವಿಸ್ತೃತ ಸಭೆ ನಡೆಸುವಂತೆ ನಿರ್ದೇಶಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಆರ್ ಸ್ನೇಹಲ್, ಅಪರ ಜಿಲ್ಲಾಧಿಕಾರಿ ಗೀತಾ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande