ಮರಾಠ ನಿಗಮ : ಆಹಾರ ವಾಹಿನಿ ಅರ್ಜಿ ಆಹ್ವಾನ
ಬಳ್ಳಾರಿ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಸಹಾಯಧನ ಪಡೆಯಲು ಆನ್‌ಲೈನ್ ಸೇವಾ ಸಿಂಧು ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜ
ಮರಾಠ ನಿಗಮ : ಆಹಾರ ವಾಹಿನಿ ಅರ್ಜಿ ಆಹ್ವಾನ


ಬಳ್ಳಾರಿ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಸಹಾಯಧನ ಪಡೆಯಲು ಆನ್‌ಲೈನ್ ಸೇವಾ ಸಿಂಧು ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ.

ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷ ಸಹಾಯಧನ ನೀಡಲಾಗುತ್ತದೆ ಹಾಗೂ ಉಳಿಕೆ ಮೊತ್ತವನ್ನು ಬ್ಯಾಂಕ್, ಹಣಕಾಸು ಸಂಸ್ಥೆಗಳಿ0ದ ಸಾಲ ಪಡೆಯಬಹುದಾಗಿದೆ.

ಬಳ್ಳಾರಿ ನಗರ, ಸಂಡೂರು ಕ್ಷೇತ್ರದ ಮರಾಠ ಜನಾಂಗದ ಹಿಂದುಳಿದ ವರ್ಗಗಳ ಪ್ರವರ್ಗ-3 ಬಿ ರಡಿ 2(ಎ)ರಿಂದ 2 (ಎಫ್) ವರೆಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.3 ಲಕ್ಷ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು.

ಆಹಾರವಾಹಿನಿ (ಆಹಾರಕಿಯೋಸ್ಕ್) ಯೋಜನೆ ಪಡೆಯಲು ಮರಾಠ ಜನಾಂಗದಲ್ಲಿ ಪ್ರವರ್ಗ 3-ಬಿ ರಡಿ 2(ಎ) ರಿಂದ 2(ಎಫ್) ವರೆಗೆ ಬರುವ (ಎ)ಮರಾತ, ಮರಾಠ, (ಬಿ)ಅರೆಕ್ಷತ್ರಿ, ಅರೆ ಮರಾಠ, ರ‍್ಯಮರಾಠ (ಸಿ)ಆರ್ಯ, ಆರ್ಯರು (ಡಿ)ಕೊಂಕಣ ಮರಾಠ (ಇ) ಕ್ಷತ್ರಿಯ ಮರಾತ/ಕ್ಷತ್ರಿಯ ಮರಾಠ (ಎಫ್) ಕುಳವಾಡಿ ಜಾತಿಗಳಿಗೆ ಅನ್ವಯವಾಗುತ್ತದೆ.

ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಒ0ದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್, ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾ.05 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ದೂ.080-29903994, ಮೊ. 8867537799 ಗೆ ಸಂಪರ್ಕಿಸಬಹುದು ಅಥವಾ ಬಳ್ಳಾರಿ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ(ನಿ), ಜಿಲ್ಲಾಡಳಿತ ಭವನ, ಬಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂ.53, ಅನಂತಪುರ ರಸ್ತೆ, ಬಳ್ಳಾರಿ ಕಚೇರಿ (ದೂ.08392-267038) ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ(ನಿ)ದ ಜಿಲ್ಲಾ ವ್ಯವಸ್ಥಾಪಕ ಭಾವಿಕಟ್ಟೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande