ಆರೋಗ್ಯ ಇಲಾಖೆಯಿಂದ ರಾಷ್ಟ್ರೀಯ ರೇಬೀಸ್ ನಿಯಂತ್ರಣ
ಕೊಪ್ಪಳ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೌಲಾನ ಅಜಾದ್ ಮಾದರಿಯ ಆಂಗ್ಲ ಮಾಧ್ಯಮ ಶಾಲೆ ಕ
National Rabies Control by the Health Department


ಕೊಪ್ಪಳ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೌಲಾನ ಅಜಾದ್ ಮಾದರಿಯ ಆಂಗ್ಲ ಮಾಧ್ಯಮ ಶಾಲೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ರಂದು ಶಾಲೆಯ ಸಭಾ ಭವನದಲ್ಲಿ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮ ಹಾಗೂ ಆರೋಗ್ಯ ಅರಿವು ಆಂದೋಲನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ದಿಡ್ಡಿಕೇರಿಯ ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ.ವೈಜಯಂತಿ ಅವರು ಮಾತನಾಡಿ, ನಾಯಿ ಕಡಿತದಿಂದ ಎಲ್ಲರೂ ಜಾಗೃತರಾಗಬೇಕು. ರೇಬೀಸ್ ಒಂದು ವೈರಾಣುವಿನಿಂದ ಹರಡುವ ಸೋಂಕು. ಇದು ಸೋಂಕಿತ ಪ್ರಾಣಿಗಳ (ನಾಯಿ ಕಡಿತದಿಂದ ಶೇ.97, ಬೆಕ್ಕು ಶೇ.2, ನರಿ, ಮೂಂಗೂಸ್, ಹಸು, ಕುರಿ, ಟಗರು ಕಡಿತದಿಂದ ಶೇ.1) ಜೊಲ್ಲಿನ ಸಂಪರ್ಕದಿಂದ, ತರೆದ ಚರ್ಮದ ಮೇಲೆ ನೆಕ್ಕುವಿಕೆಯಿಂದ, ಪರಚುವಿಕೆಯಿಂದ ಹಾಗೂ ಕಡಿತದಿಂದ ಹರಡುತ್ತವೆ.

ಹೆಚ್ಚು ಪ್ರಮಾಣದಲ್ಲಿ ಬೀದಿನಾಯಿಗಳ ಕಡಿತದಿಂದ ಸಂಭವಿಸುತ್ತವೆ. ಒಂದು ವೇಳೆ ನಾಯಿ ಕಚ್ಚಿದರೆ ಕಚ್ಚಿದ ಜಾಗವನ್ನು ಸೋಪು ಮತ್ತು ಶುದ್ದ ಹರಿಯುವ ನಲ್ಲಿ(ನಳ) ನೀರಿನಲ್ಲಿ 15 ನಿಮಿಷ ತೊಳೆಯಬೇಕು. ಕಚ್ಚಿದ ಜಾಗಕ್ಕೆ ಸ್ಥಳೀಯವಾಗಿ ಲಭ್ಯವಿರುವ ನಂಜು ನಿರೋಧಕ ಔಷಧಿ ಲಭ್ಯವಿದ್ದರೆ ಹಚ್ಚಿರಿ, ಕಚ್ಚಿದ ಜಾಗವನ್ನು ಬ್ಯಾಂಡೇಜ್ ಅಥವಾ ಯಾವುದೇ ರೀತಿಯ ಬಟ್ಟೆಯಿಂದ ಕಟ್ಟಬೇಡಿ. ಕಚ್ಚಿದ ಜಾಗಕ್ಕೆ ಕೆಸರು ಅಥವಾ ಹಸುವಿನ ಸಗಣೆ, ಕಾಫಿಪುಡಿ, ಮೆಣಸಿನಪುಡಿ, ಸುಣ್ಣ ಅಥವಾ ಇತರೆ ಯವುದೇ ಕಿರಿ-ಕಿರಿ ಉಂಟುಮಾಡುವ ಪದಾರ್ಥ ಹಚ್ಚಬೇಡಿ. ಸರಿಯಾದ ಸಮಯಕ್ಕೆ ಎಲ್ಲಾ ನಾಯಿಗಳಿಗೆ ಪಶು ಸಂಗೋಪನಾ ಇಲಾಖೆಯಿಂದ ನೀಡುವ ಚುಚ್ಚುಮದ್ದನ್ನು ತಪ್ಪದೇ ಹಾಕಿಸಬೇಕು ಎಂದು ಹೇಳಿದರು.

ನಾಯಿ ಅಥವಾ ಯಾವುದೇ ಪ್ರಾಣಿ ಕಡಿತವಾದಲ್ಲಿ ತಕ್ಷಣ ನಿಮ್ಮ ಹತ್ತಿರದ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ, ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಿ. ನಾಯಿ ಕಡಿತದ ಬಗ್ಗೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಹಾಗೂ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ರೇಬೀಸ್ ತಡೆಗಟ್ಟುವ ಲಸಿಕೆ(ಎಆರ್‍ವಿ) ಮತ್ತು ರೇಬಿಸ್ ಇಮ್ಯುನೊ ಗ್ಲೋಬ್ಯುಲಿನ್ (ಆರ್‍ಐಜಿ) ಚಿಕಿತ್ಸೆ ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ ಅವರು ಮಾತನಾಡಿ, ಸಮಗ್ರ ರೋಗಗಳ ಕಣ್ಗಾವಲು ಕಾರ್ಯಕ್ರಮ, ಹಾವು ಕಡಿತ ನಿಯಂತ್ರಣ ಕಾರ್ಯಕ್ರಮ, ಬೇಸಿಗೆ ಸಮಯದಲ್ಲಿ ಅನುಸರಿಸುವ ಆರೋಗ್ಯದ ಮುಂಜಾಗ್ರತ ಕ್ರಮಗಳ ಕುರಿತು ವಿವರವಾಗಿ ಮಾತನಾಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಇವರು ಬಾಲ್ಯವಿವಾಹ ನಿμÉೀಧ, ಹೆಣ್ಣು ಮಕ್ಕಳಲ್ಲಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೊಸದಾಗಿ ಹೆಚ್.ಪಿ.ವಿ ವ್ಯಾಕ್ಸಿನ್, ರಕ್ತಹೀನತೆ ತಡೆಗಟ್ಟುವಿಕೆ, ಪೌಷ್ಠಿಕ ಆಹಾರ ಸೇವನೆ, ತಂಬಾಕು ನಿಯಂತ್ರಣ, ವೈಯಕ್ತಿಕ ಸ್ವಚ್ಛತೆ ಕುರಿತು ಮಾತನಾಡಿದರು.

ಮುಖ್ಯೋಪಾಧ್ಯಾಯರಾದ ಪ್ರಕಾಶ ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಇಂದಿನ ವಿದ್ಯಾರ್ಥಿಗಳಿಗೆ ಬಹಳ ಪ್ರಯೋಜನಕಾರಿಯಾಗಿದೆ. ಜೊತೆಗೆ ವಿವಿಧ ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು, ಇದರ ಸದುಪಯೋಗ ಪಡೆದುಕೊಂಡು ತಮ್ಮ ತಮ್ಮ ಗ್ರಾಮಗಳಲ್ಲಿ, ವಾರ್ಡ್‍ಗಳಲ್ಲಿ ಹಾಗೂ ಸುತ್ತ-ಮುತ್ತಲಿನ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸರಿತಾ, ಆರೋಗ್ಯ ನಿರೀಕ್ಷಣಾಧಿಕಾರಿ ಲೋಹಿತ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿ ಶ್ರೀನಿವಾಸ, ಸಹಶಿಕ್ಷಕರು, ಆಶಾ ಕಾರ್ಯಕರ್ತೆಯರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande